ಚಿತ್ರ-ಉಮಾಪ್ರಸಾದ್ ರೈ ನಡುಬೈಲು
ಸೋಲನ್ನು ಎದುರಿಸುವ ಗುಣ ವಿದ್ಯಾರ್ಥಿಗಳಲ್ಲಿ ಬೆಳೆಯಬೇಕು- ಮಾಧವ ಭಟ್
ಪುತ್ತೂರು: ಜೀವನದಲ್ಲಿ ಸೋಲು-ಗೆಲುವು ಸಹಜ, ಸೋಲು ಬಂದಾಗ ಎದೆಗುಂದದೆ, ಅದನ್ನು ಸಮರ್ಥವಾಗಿ ಎದುರಿಸಿ, ಜಯವನ್ನು ಪಡೆಯುವ ಶಕ್ತಿ ವಿದ್ಯಾರ್ಥಿಗಳಲ್ಲಿ ಬೆಳೆಯಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ ಎಚ್. ಮಾಧವ ಭಟ್ರವರು ಹೇಳಿದರು.
ಸಮಾರಂಭವನ್ನು ದೀಪ ಬೆಳಗಿಸಿ, ಉದ್ಘಾಟನೆಗೈದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸವಣೂರು ಕೆ.ಸೀತಾರಾಮ ರೈಯವರು ಶುಭಹಾರೈಸಿದರು.
ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಟ್ರಸ್ಟಿ ಎನ್ ಸುಂದರ ರೈ, ವಿದ್ಯಾರಶ್ಮಿ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಪಾಧ್ಯಕ್ಷ ಪ್ರದೀಪ್ ಕುಮಾರ್ ರೈ ಪನ್ನೆ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಶಂಪಾಲ ಶೇಷಗಿರಿ, ವಿದ್ಯಾರಶ್ಮಿ ವಿದ್ಯಾಲಯದ ಉಪಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಧನ್ಯ,ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಸೀತಾರಾಮ ಕೇವಳರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಾದ ಯಶಸ್ ಸ್ವಾಗತಿಸಿ, ಶಿಲ್ಪಾ ವಂದಿಸಿದರು. ಮಹಮ್ಮದ್ ಅಜ್ಮಲ್ ಕಾರ್ಯಕ್ರಮ ನಿರೂಪಿಸಿದರು.