ಯೋಗ ವಿಕಾಸದ ಸಂಕೇತ – ಪ್ರೇಮ ಜಿ
ಪುತ್ತೂರು: ಹಾರಾಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಥಮಿಕ ಶಾಲೆಯಲ್ಲಿ ಜೂ. 21ರಂದು ವಿಶ್ವ ಯೋಗ ದಿನಾಚರಣೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ಸಂದೇಶ ವೀಕ್ಷಣೆ ಬಳಿಕ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆ ಆಚರಿಸಲಾಯಿತು.
ಯೋಗಾಭ್ಯಾಸದ ಆರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ನಗರ ಸಭಾ ಸದಸ್ಯೆ ಪ್ರೇಮಲತಾ ಜಿ ನಂದಿಲ ಅವರು ಮಾತನಾಡಿ ಯೋಗವು ಮನುಷ್ಯನ ಮಾನಸಿಕ ಹಾಗೂ ದೈಹಿಕ ವಿಕಾಸದ ಹಾದಿಯ ತಂತ್ರ. ಮನುಷ್ಯನಲ್ಲಿ ಧನಾತ್ಮಕ ಮನೋಭಾವನೆಯನ್ನು ಬೆಳೆಸುವಲ್ಲಿ ಯೋಗಭ್ಯಾಸವು ಸಹಕರಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಪ್ರತಿಮಾ ಯು ರೈ ಮಾತನಾಡಿ ಯೋಗಾಭ್ಯಾಸವು ನಿರಂತರವಾದ ಪ್ರಕ್ರಿಯೆಯಾಗಲಿ. ಆ ಮೂಲಕ ಜೀವನ ಸಾರ್ಥಕ್ಯತೆಯ ಯೋಗ ಕೂಡಿ ಬರಲಿ ಎಂದರು. ಶಾಲೆಯ ಯೋಗ ಶಿಕ್ಷಕ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಗುರು ಯೋಗ ಸಂಘದ ಅಧ್ಯಕ್ಷರಾದ ರಾಮಣ್ಣ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕ ಮುದರ ಎಸ್ ಸ್ವಾಗತಿಸಿದರು. ಸಹಶಿಕ್ಷಕಿ ಶುಭಲತಾ ಕೆ ವಂದಿಸಿದರು. ಶಿಕ್ಷಕ ಪ್ರಶಾಂತ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕವೃಂದ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ಭಾಗವಹಿಸಿದ್ದರು.