ಪುತ್ತೂರು: ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಆಶ್ವಿನ್ ಎಲ್ ಶೆಟ್ಟಿಯವರು ಕೃಷಿ ಅಧ್ಯಯನ ಪ್ರವಾಸಕ್ಕಾಗಿ ಇಸ್ರೇಲ್ಗೆ ತೆರಳಿದ್ದಾರೆ.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನೇತೃತ್ವದಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯಿಂದ ಒಟ್ಟು 26 ಮಂದಿ ಕೃಷಿ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದು, ಈ ಪೈಕಿ ಆಶ್ವಿನ್ ಎಲ್ ಶೆಟ್ಟಿಯವರು ಸವಣೂರು ಸಿ.ಎ.ಬ್ಯಾಂಕಿನ ಪ್ರತಿನಿಧಿಯಾಗಿ ಜೂ.20 ರಿಂದ 25ರತನಕ ಇಸ್ರೇಲ್ ದೇಶದ ವಿವಿಧ ಕಡೆಗಳಲ್ಲಿ ಸುಧಾರಿತ ಕೃಷಿ ಪದ್ಧತಿಯ ಕುರಿತು ಅಧ್ಯಯನ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.