Home_Page_Advt
Home_Page_Advt
Home_Page_Advt

ರಾಮಕುಂಜ: ಆ.ಮಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1


ರಾಮಕುಂಜ : ಇಲ್ಲಿನ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಹಾಗೂ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.

ಕಾರ್‍ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಂಸ್ಥೆಯ ಕಾರ್‍ಯದರ್ಶಿ ಕೆ.ಸೇಸಪ್ಪ.ರೈ ಪ್ರತಿನಿತ್ಯ ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ. ವಿದ್ಯಾರ್ಥಿಗಳಿಗೆ ಯೋಗದಿಂದ ನಮ್ಮ ಮನಸ್ಸನ್ನು ಏಕಾಗ್ರತೆ ಒಳಪಡಿಸಲು ಸಹಾಕಾರಿಯಾಗಿದೆ. ಅಲ್ಲದೇ, ಮಾನಸಿಕ-ದೈಹಿಕ ಆರೋಗ್ಯಕ್ಕಾಗಿ ಮತ್ತು ಒತ್ತಡ ನಿವಾರಣೆಗೆ ಯೋಗಾಭ್ಯಾಸ ಒಳ್ಳೆಯದು ಎಂದು ಹೇಳಿದರು. ನಂತರ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮ, ವಾಸಪ್ಪ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಸಾಮೂಹಿಕವಾಗಿ ಯೋಗಾಭ್ಯಾಸವನ್ನು ಮಾಡಿದರು. ಈ ಸಂದರ್ಭದಲ್ಲಿ ಪ್ರೌಢ ಶಾಲಾ ಮುಖ್ಯಗುರು ಗಾಯತ್ರಿ, ಆಡಳಿತಾಧಿಕಾರಿ ಆನಂದ.ಎಸ್.ಟಿ, ಪ್ರಾಥಮಿಕ ಶಾಲಾ ಮುಖ್ಯಗುರು ಲೋಹಿತ ಹಾಗೂ ಶಿಕ್ಷಕರು, ಸಂಸ್ಥೆಯ ಸಿಬಂದಿ ವರ್ಗ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.