Home_Page_Advt
Home_Page_Advt
Home_Page_Advt

ಬೆಟ್ಟಂಪಾಡಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿಯವರು ಯೋಗದ ಮಹತ್ವವನ್ನು ತಿಳಿಸಿ ಉತ್ತಮ ಆರೋಗ್ಯ ಮತ್ತು ಬೌದ್ದಿಕ ವಿಕಾಸಕ್ಕಾಗಿ ವಿದ್ಯಾರ್ಥಿಗಳು ಯೋಗವನ್ನು ಅಳವಡಿಸಿಕೊಳ್ಳುವಂತೆ ಕರೆಯಿತ್ತರು. ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ರಂಗನಾಥ ರೈ ಗುತ್ತು ಇವರು ವಿದ್ಯಾರ್ಥಿಗಳಿಗೆ ಯೋಗ ದಿನಾಚರಣೆ ಮತ್ತು ಯೋಗ ಮಹತ್ವದ ಬಗ್ಗೆ ತಿಳಿ ಹೇಳಿದರು. ಶ್ರೀ ಹರಿಪ್ರಸಾದ್ ಎಸ್ ಸ್ವಾಗತಿಸಿದರು. ಸಮಾಜಕಾರ್ಯ ವಿಭಾಗದ ಹಿರಿಯ ವಿದ್ಯಾರ್ಥಿನಿ ಕು. ತನುಷಾ ಇವರು ಪ್ರಾತ್ಯಕ್ಷಿಕೆ ನೀಡಿದರು. ಶ್ರೀ ಮಾರಣ್ಣ ಕಾರ್ಯಕ್ರಮ ನಿರೂಪಿಸಿದರು. ಡಾ. ನಿರೀಕ್ಷಣ್ ಸಿಂಗ್ ಗೌಗಿ ಎಸ್ ಕೆ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಪ್ರಕಾಶ್ ಬೈಲಾಡಿ, ಗ್ರಂಥಪಾಲಕರಾದ ಶ್ರೀ ರಾಮ ಕೆ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.