ನಿಡ್ಪಳ್ಳಿ: ಬಡಗನ್ನೂರು ಪಟ್ಟೆ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ ಜೂ 21 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಹಾಲಿಂಗೇಶ್ವರ ಭಟ್ ಪಳನೀರ್ ಮಕ್ಕಳಿಗೆ ಯೋಗದ ಮಹತ್ವದ ಬಗ್ಗೆ ಮಾಹಿತಿ ನೀಡಿ ಬಳಿಕ ಯೋಗಾಭ್ಯಾಸ ನೀಡಿದರು. ವಿದ್ಯಾಸಂಸ್ಥೆ ಅಧ್ಯಕ್ಷ ವೇಣುಗೋಪಾಲ ಭಟ್ ಪಿ.ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ವತಿಯಿಂದ ಶಾಲೆಗೆ ಸೇರಿದ ನೂತನ 80 ಮಕ್ಕಳಿಗೆ ಉಚಿತ ಸಮವಸ್ತ್ರ, ಟೈ, ಬೆಲ್ಟ್ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಗಳ ಸಂಚಾಲಕ ನಾರಾಯಣ ಭಟ್ ಬಿ, ನಿರ್ದೇಶಕ ಶಿವಪ್ರಸಾದ್ ಭಟ್ ಪಿ, ಪ.ಪೂ ಕಾಲೇಜಿನ ಪ್ರಾಂಶುಪಾಲೆ ನವ್ಯತಾ ರೈ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುಮನಾ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶಂಕರಿ, ಹಾಗೂ ವಿದ್ಯಾಸಂಸ್ಥೆಗಳ ಅಧ್ಯಾಪಕ ವೃಂದದವರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಮಕ್ಕಳ ಪೋಷಕರು, ಮತ್ತು ಮಕ್ಕಳು ಉಪಸ್ಥಿತರಿದ್ದರು. ಶಾಲಾ ಸಹ ಶಿಕ್ಷಕ ವಿಶ್ವನಾಥ ಬೊಳ್ಳಾಡಿ, ಸ್ವಾಗತಿಸಿ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಯಮುನಾ ವಂದಿಸಿದರು. ಶಿಕ್ಷಕ ಗೋಪಾಲಕೃಷ್ಣ ಭಟ್ ಕಾರ್ಯಕ್ರಮ ನಿರೂಪಿಸಿದರು.