HomePage_Banner
HomePage_Banner
HomePage_Banner
HomePage_Banner

ಇಡ್ಯಡ್ಕ ಶಾಲೆಯಲ್ಲಿ ಯೋಗ ದಿನಾಚರಣೆ

ಕಾಣಿಯೂರು: ಇಡ್ಯಡ್ಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಇಡ್ಯಡ್ಕರವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶ್ರೀಮತಿ ಗೀತಾ ಎಂ ಎ ವಹಿಸಿದರು. ವೇದಿಕೆಯಲ್ಲಿ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಚಾರ್ವಾಕ ಘಟ ಸಮಿತಿ ಅಧ್ಯಕ್ಷ ದಿನೇಶ್ ಐ ಕೆ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸುಂದರ ಗೌಡ ಕೀಲೆ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರಾದ ಮನೋಹರ ಇಡ್ಯಡ್ಕ, ಧರ್ನಪ್ಪ ಗೌಡ ಪತ್ತನೆಜಾಲ್, ಕೇಶವ ಐ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಮೀನಾಕ್ಷಿ, ಪ್ರೇಮ ಉಪಸ್ಥಿತರಿದ್ದರು. ಶಾಲಾ ಮುಖ್ಯ ಗುರು ಜಯಂತ ವೈ ಯೋಗ ತರಬೇತಿ ನೀಡಿದರು. ಹಿಮಾನಿ, ಪ್ರಣಮ್ಯ, ಪಲ್ಲವಿ, ಶ್ರಾವ್ಯ ಪ್ರಾರ್ಥಿಸಿದರು. ಶಾಲಾ ಶಿಕ್ಷಕರಾದ ಚಂದ್ರಿಕಾ ಸ್ವಾಗತಿಸಿ, ಅಕ್ಷತಾ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.