Home_Page_Advt
Home_Page_Advt
Home_Page_Advt

ದೇಶದ ಏಕತೆಗಾಗಿ ಶ್ರಮಿಸಿದ ಮಹಾನ್ ಆತ್ಮ ಶ್ಯಾಮ್ ಪ್ರಸಾದ್ ಮುಖರ್ಜಿ: ಬಲಿದಾನ ದಿನ ಕಾರ್ಯಕ್ರಮದಲ್ಲಿ ಚಂದ್ರಶೇಖರ್ ರಾವ್ ಬಪ್ಪಳಿಗೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದೇಶದ ಏಕತೆಗಾಗಿ ಶ್ರಮಿಸಿದ ಮಹಾನ್ ಆತ್ಮ ಶ್ಯಾಮ್ ಪ್ರಸಾದ್ ಮುಖರ್ಜಿ. ಅವರ ಆದರ್ಶಗಳನ್ನು ಅವರ ಬಲಿದಾನ ದಿನದಂದು ನೆನಪು ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ್ ರಾವ್ ಬಪ್ಪಳಿಗೆ ಅವರು ನುಡಿದರು.

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಜೂ. 23ರಂದು ಬೆಳಿಗ್ಗೆ ನಡೆದ ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನ ಕಾರ್ಯಕ್ರಮದಲ್ಲಿ ಅವರು ನುಡಿನಮನ ಸಲ್ಲಿಸಿದರು. ಭಾರತೀಯ ಸಂಸ್ಕೃತಿಯ ಆಧಾರದ ಮೇಲೆ ದೇಶವನ್ನು ಪುನರ್ ನಿರ್ಮಾಣ ಮಾಡುವ ಹಾಗು ಜಗತ್ತಿನಲ್ಲಿ ಭಾರತವನ್ನು ಪ್ರಬಲ ರಾಷ್ಟ್ರವನ್ನಾಗಿಸುವ ಗುರಿಯನ್ನು ಹೊಂದಿ, ಆ ಮಹಾನ್ ಕಾರ್ಯಕ್ಕೆ ತಮ್ಮ ಬದುಕನ್ನು ಮುಡುಪಾಗಿಟ್ಟ ಶ್ಯಾಮ ಪ್ರಸಾದ್ ಮುಖರ್ಜಿ ಅವರು ಶ್ರೇಷ್ಠ ವಿದ್ವಾಂಸರು, ಶ್ರೇಷ್ಠ ರಾಜನೀತಿ ತಜ್ಞ, ಅಸಾಧಾರಣ ಸಂಸದೀಯ ಪಟು, ಭಾರತೀಯ ರಾಜಕೀಯ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಅಪಾರ. ಪಾಕಿಸ್ಥಾನದಲ್ಲಿ ಹಿಂದುಗಳ ಮೇಲೆ ನಡೆದ ದೌರ್ಜನ್ಯಕ್ಕೆ ಕಿಡಿಕಾಡಿದ ಅವರು ಮಂತ್ರಿ ಮಂಡಲಕ್ಕೆ ರಾಜೀನಾಮೆ ನೀಡಿದರು. ನೀತಿ, ತತ್ವದ ಆಧಾರದ ಮೇಲೆ ಮಂತ್ರಿ ಪದವಿ ತ್ಯಾಗ ಮಾಡಿದ ಸ್ವಾತಂತ್ರ್ಯ ಭಾರತದ ಪ್ರಪ್ರಥಮ ರಾಷ್ಟ್ರ ನಾಯಕ ಶ್ಯಾಮ್ ಪ್ರಸಾದ್ ಮುಖರ್ಜಿಯವರು ದೇಶದ ಪರಿಸ್ಥಿತಿ ಅಧೋಗತಿಗೆ ಇಳಿದಾಗ, ರಾಜಕೀಯ ಅಸ್ಥಿರತೆ, ಆಡಳಿತ ದೋಷ ಕಂಡಾಗ ಅವಿರತ ದುಡಿದು ‘ಭಾರತೀಯ ಜನಸಂಘ’ ಎಂಬ ಹೊಸ ಪಕ್ಷಕ್ಕೆ ನಾಂದಿ ಹಾಡಿದರು.

1953 ಅಕ್ಟೋಬರ್ 23 ರಂದು ಕಾಶ್ಮೀರವನ್ನು ಭಾರತದಲ್ಲಿ ಉಳಿಸಲು ನಡೆಸಿದ ಹೋರಾಟದಲ್ಲಿ ಡಾ|| ಮುಖರ್ಜಿಯವರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದರು. ಅವರ ಅದರ್ಶಗಳನ್ನು, ತ್ಯಾಗ ಬಲಿದಾನ ವ್ಯರ್ಥವಾಗದಂತೆ ದೇಶದ ಅಖಂಡತೆಯನ್ನು ಉಳಿಸಿ, ದೇಶವನ್ನು ಕಟ್ಟಿ ಬೆಳೆಸುವ ಪ್ರಯತ್ನ ಮಾಡೋಣ ಎಂದರು. ಶಾಸಕ ಸಂಜೀವ ಮಠಂದೂರು, ಬಿಜೆಪಿ ಮಂಡಲದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಮಂಡಲದ ಅಧ್ಯಕ್ಷ ಜೀವಂಧರ್ ಜೈನ್, ಪ್ರಧಾನ ಕಾರ್ಯದರ್ಶಿಗಳಾದ ಶಂಭು ಭಟ್, ಗೌರಿ ಬನ್ನೂರು, ರಾಮ್‌ದಾಸ್ ಹಾರಾಡಿ, ಗೋಪಾಲಕೃಷ್ಣ ಹೇರಳೆ,ತಾ.ಪಂ ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ದಿವ್ಯಾ ಪುರುಷೋತ್ತಮ, ಜಯರಾಮ ಪೂಜಾರಿ, ಪುರುಷೋತ್ತಮ ಮುಂಗ್ಲಿಮನೆ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.