HomePage_Banner
HomePage_Banner
HomePage_Banner
HomePage_Banner

ಉಪ್ಪಿನಂಗಡಿ ಇಂದ್ರಪ್ರಸ್ಥ ಪಪೂ. ಕಾಲೇಜು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಗ್ರಾಮೀಣ ಪ್ರದೇಶದಲ್ಲಿದ್ದರೂ ವಿದ್ಯಾರ್ಥಿಗಳಲ್ಲಿನ ಅಂತರ್ಗತವಾದ ಪ್ರತಿಭೆಗಳನ್ನು ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಅನಾವರಣಗೊಳಿಸುತ್ತಿರುವ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾ ಸಂಸ್ಥೆಯು ಬಹುಮುಖಿ ಕ್ಷೇತ್ರದಲ್ಲಿ ಸಾಧನೆ ತೋರುತ್ತಿರುವುದು ಶ್ಲಾಘನೀಯವಾಗಿದೆ ಎಂದು ಬೆಂಗಳೂರಿನ ಶಿಕ್ಷಣ ತಜ್ಞೆ ಶ್ರೀಮತಿ ಬೀನಾ ಬಾಬು ಜೋಸೆಫ್ ಹೇಳಿದರು.
ಅವರು ಜೂನ್ 22ರಂದು ಉಪ್ಪಿನಂಗಡಿ ಇಂದ್ರಪ್ರಸ್ಥ ಪಿಯು ಕಾಲೇಜಿನ ಪ್ರಥಮ ಬ್ಯಾಚಿನ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕ್ಷೇತ್ರದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ವಿದ್ಯಾ ಸಂಸ್ಥೆಯ ಸಂಚಾಲಕ ಯು.ಎಸ್.ಎ. ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಹೆತ್ತವರೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಪೈಕಿ ಸರ್ವಾಂಗೀಣ ಸಾಧನೆ ತೋರಿದ ಶ್ರೀರಾಮ್ ಭಟ್ ಕೈಲಾರ್‌ರಿಗೆ ಚಿನ್ನದ ಪದಕವನ್ನು ನೀಡಿ ಗೌರವಿಸಲಾಯಿತು.
ಕಾಲೇಜಿನ ಪ್ರಾಚಾರ್ಯ ರವೀಂದ್ರ ದರ್ಬೆ, ಶಿಕ್ಷಣ ಸಲಹೆಗಾರ ಹೆಚ್.ಕೆ. ಪ್ರಕಾಶ್ ಇದ್ದರು. ಉಪನ್ಯಾಸಕಿಯಾದ ಜಯಂತಿ ಸ್ವಾಗತಿಸಿ, ಹರಿಣಾಕ್ಷಿ ವಂದಿಸಿದರು. ಸುಪ್ರಿಯ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.