HomePage_Banner
HomePage_Banner
HomePage_Banner
HomePage_Banner

ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ಪರಾರಿಗೆ ಯತ್ನ ಪ್ರಕರಣ -ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ಪುತ್ತೂರು ನ್ಯಾಯಾಲಯ

ಪುತ್ತೂರು: 2013ರಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರು ಪಡಿಸಿ ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಕಬಕದಲ್ಲಿ ಪರಾರಿಯಾಗಲೆತ್ನಿಸಿದ ಆರೋಪಿಗೆ ಪುತ್ತೂರು ನ್ಯಾಯಾಲಯ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಕಡಬದಲ್ಲಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಸವಣೂರು ನಿವಾಸಿ ಮಹಮ್ಮದ್ ಶಬೀರುದ್ದೀನ್ ಅವರನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ವಿಚಾರಣೆಗಾಗಿ ಪೊಲೀಸರು 2013ರಲ್ಲಿ ಕರೆ ತಂದು ವಿಚಾರಣೆ ಮುಗಿದ ಬಳಿಕ ಬಸ್‌ನಲ್ಲಿ ಜೈಲಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕಬಕದಲ್ಲಿ ಆರೋಪಿ ಮಹಮ್ಮದ್ ಶಬೀರುದ್ದೀನ್ ಪರಾರಿಯಾಗಲೆತ್ನಿಸಿದರು.  ಆರೋಪಿಯನ್ನು ಪೊಲೀಸರು ಬಂಧಿಸಿ ಆತನ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲು ಮಾಡಿದ್ದರು. ವಿಚಾರಣೆ ನಡೆಸಿದ ಪುತ್ತೂರು ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್ ಅವರು ಆರೋಪಿಗೆ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ರೂ. ೧ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರ ಸಹಾಯಕ ಸರಕಾರಿ ಅಭಿಯೋಜಕ ದೇವೆಂದ್ರ ವಾದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.