HomePage_Banner
HomePage_Banner
HomePage_Banner

 ವೆಂಕಟನಗರ ಕಾಲೇಜಿನಲ್ಲಿ ಪರಿಸರ ಜಾಗೃತಿ ಮಾಹಿತಿ, ಸಸಿ ನಾಟಿ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

ನಿಡ್ಪಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಿ.ಸಿ. ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಟ್ಟಂಪಾಡಿ ವಲಯ, ಕಾಲೇಜು ಮತ್ತು ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಸ.ಪ.ಪೂ. ಕಾಲೇಜು ವೆಂಕಟನಗರ ಮತ್ತು ಯುವಶಕ್ತಿ ಹಿರಿಯ ವಿದ್ಯಾರ್ಥಿ ಸಂಘ ಸ.ಪ.ಪೂ. ಕಾಲೇಜು ವೆಂಕಟನಗರ ಇದರ ಸಂಯುಕ್ತ ಆಶ್ರಯದಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಜೂ‌.24 ರಂದು ಮಧ್ಯಾಹ್ನ  ಸ.ಪ.ಪೂ.ಕಾಲೇಜು ವೆಂಕಟನಗರದಲ್ಲಿ ನಡೆಯಿತು.

ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ  ಸಾಜ ರಾಧಾಕೃಷ್ಣ ಆಳ್ವ ಉದ್ಘಾಟಿಸಿ ಶುಭ ಹಾರೈಸಿದರು. ಉಪನ್ಯಾಸಕ ಹರಿಪ್ರಕಾಶ್ ಬೈಲಾಡಿ ಅಧ್ಯಕ್ಷತೆ ವಹಿಸಿದರು. ಭೌತಶಾಸ್ತ್ರ ಉಪನ್ಯಾಸಕಿ ನಿರ್ಮಲಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಪೂರ್ಣ ಮಾಹಿತಿ ನೀಡಿದರು. ಯೋಜನೆಯ ನಿರ್ದೇಶಕ ಸತೀಶ್ ಶೆಟ್ಟಿ, ಜನಜಾಗೃತಿ ವೇದಿಕೆಯ ತಾಲೂಕು ನಿಕಟ ಪೂರ್ವ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಪ್ರೌಢಶಾಲಾ ಮುಖ್ಯಸ್ಥೆ ಸಂಧ್ಯಾರಾಣಿ, ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿನಯ ವಸಂತ, ಜನಜಾಗೃತಿ ವೇದಿಕೆಯ ಬಲ್ನಾಡು ಗ್ರಾಮಾಧ್ಯಕ್ಷ ಎ.ಎಂ.ಪ್ರವೀಣ್ಚಂದ್ರ ಆಳ್ವ ಮುಂಡೇಲು ಸಂದರ್ಭೋಚಿತವಾಗಿ ಮಾತನಾಡಿದರು. ಬಲ್ನಾಡು ಸಿ.ಎ.ಬ್ಯಾಂಕ್ ಅಧ್ಯಕ್ಷ ಎ.ಎಂ.ಪ್ರಕಾಶ್ಚಂದ್ರ‌ ಆಳ್ವ ಮುಂಡೇಲು,  ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಮಹಾಬಲ ರೈ ಒಳತ್ತಡ್ಕ, ಯೋಜನಾಧಿಕಾರಿ ಜನಾರ್ದನ. ಎಸ್, ಕೃಷಿ ಮೆಲ್ವೀಚಾರಕ ಉಮೇಶ್, ಬಲ್ನಾಡು ಗ್ರಾಮ ಪಂಚಾಯತ್ ಸದಸ್ಯೆ ಇಂದಿರಾ ಎಸ್‌.ರೈ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಸಾಜ ಸಾರ್ಯ ಒಕ್ಕೂಟದ ನೂತನ ಪ್ರಗತಿಬಂಧು ತಂಡದ ಸದಸ್ಯರಿಗೆ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ನಿರ್ಣಯ ಪುಸ್ತಕ ಹಸ್ತಾಂತರಿಸಿ ಶುಭ ಹಾರೈಸಿದರು. ಪರಿಸರದ ಬಗ್ಗೆ ಶಾಲಾ ಮಕ್ಕಳಿಗೆ ಏರ್ಪಡಿಸಿದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾಲೇಜು ಸುತ್ತ ಮುತ್ತ ಸುಮಾರು ನೂರು ವಿವಿಧ ಬಗೆಯ ಸಸಿಗಳನ್ನು ನೆಡಲಾಯಿತು.

ಒಕ್ಕೂಟದ ಮಾಜಿ ಅಧ್ಯಕ್ಷ ಅಂಬ್ರೋಸ್ ಡಿ’ಸೋಜಾ ಸ್ವಾಗತಿಸಿ, ಬೆಳಿಯೂರುಕಟ್ಟೆ ಪ್ರೌಢಶಾಲಾ ಸಹಶಿಕ್ಷಕಿ ಸುನೀತಾ ವಂದಿಸಿದರು. ವಲಯ ಮೆಲ್ವೀಚಾರಕಿ ಕವಿತಾ ವಸಂತ್ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಪ್ರಮೀಳಾ ಕುಮಾರಿ ಹಾಗೂ ಕಾಲೇಜು ಮತ್ತು ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಅಧ್ಯಾಪಕ ವೃಂದ, ಒಕ್ಕೂಟದ ಸದಸ್ಯರು, ಜನಜಾಗೃತಿ ವೇದಿಕೆಯ ಸದಸ್ಯರು, ಯುವಶಕ್ತಿ ಯುವಕ ಮಂಡಲದ ಸದಸ್ಯರು ಸಹಕರಿಸಿದರು.
ಚಿತ್ರ : ಸಾಜ ರಾಧಾಕೃಷ್ಣ ಆಳ್ವ ದೀಪ ಬೆಳಗಿಸಿ ಉದ್ಘಾಟಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.