ನೆಲ್ಯಾಡಿ: ಮಹಿಳೆಯರ ಮತ್ತು ಮಕ್ಕಳ ಮಾರಾಟ-ಸಾಗಾಟ ತಡೆ ಕಾವಲು ಸಮಿತಿ ಸಭೆ ಜೂ.24ರಂದು ನೆಲ್ಯಾಡಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.
ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆಯವರು ಅಧ್ಯಕ್ಷತೆ ವಹಿಸಿದರು. ಸಮಿತಿ ಸದಸ್ಯರುಗಳಾದ ಪಿಡಿಒ ಮಂಜುಳ ಎನ್., ನೆಲ್ಯಾಡಿ ಸರಕಾರಿ ಹಿ.ಪ್ರಾ.ಶಾಲಾ ಮುಖ್ಯ ಶಿಕ್ಷಕ ಆನಂದ ಅರ್ಜಿಲ, ನೆಲ್ಯಾಡಿ ಗ್ರಾ.ಪಂ.ಸದಸ್ಯರುಗಳಾದ ಜಯಾನಂದ ಬಂಟ್ರಿಯಾಲ್, ಫ್ಲೋರಿನಾ ಡಿ’ಸೋಜ, ಮೋಹಿನಿ, ಚಿತ್ರಾ, ಅಬ್ದುಲ್ ಹಮೀದ್, ಅಂಗನವಾಡಿ ಕಾರ್ಯಕರ್ತೆಯರಾದ ರಜನಿ, ಸಂಪಾವತಿ, ರಜನಿ ಉಪಸ್ಥಿತರಿದ್ದರು. ನೆಲ್ಯಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುವವರ ಮಾಹಿತಿ ಸಂಗ್ರಹಿಸಿ ಸಮಿತಿಗೆ ಹಾಗೂ ಗ್ರಾ.ಪಂ.ಗೆ ಸಲ್ಲಿಸುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಂಗನವಾಡಿ ಮೇಲ್ವಿಚಾರಕಿ ಉಮಾವತಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾ.ಪಂ.ಕಾರ್ಯದರ್ಶಿ ದೇವರಾಜ್ ಎಂ., ಸ್ವಾಗತಿಸಿದರು.