- ತನಿಖೆಗೆ ಪೊಲೀಸರ ತಂಡ ರಚನೆ
ಪುತ್ತೂರು: ಜೂನ್ 25ರಂದು ದ.ಕ ಜಿಲ್ಲಾ ವ್ಯಾಪ್ತಿಯ ವಿಟ್ಲ ಮತ್ತು ಬಂಟ್ವಾಳ ಠಾಣಾ ವ್ಯಾಪ್ತಿಗಳಲ್ಲಿ ಒಟ್ಟು 9 ಬಸ್ಸುಗಳಿಗೆ ಕಲ್ಲು ಬಿಸಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ. ಕೆಲವು ಕಿಡಿಗೇಡಿಗಳು ಈ ಕೃತ್ಯವನ್ನು ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ಅತೀ ಶೀಘ್ರದಲ್ಲಿ ಪ್ರಕರಣವನ್ನು ಪತ್ತೆ ಹಚ್ಚಲು ಪೊಲೀಸರ ತಂಡ ರಚನೆ ಮಾಡಲಾಗಿದೆ.
ಸಾರ್ವಜನಿಕರು ಸದ್ರಿ ವಿಷಯದ ಬಗ್ಗೆ ಯಾವುದೇ ಆತಂಕಕ್ಕೊಳಗಾಗಬಾರದಾಗಿ ಹಾಗೂ ಇಲ್ಲಸಲ್ಲದ ಸಾಮಾಜಿಕ ಜಾಲತಾಣದಲ್ಲಿ ಬರುವ ಸಂದೇಶಗಳಿಗೆ ಕಿವಿಕೊಡದಂತೆ ವಿನಂತಿಸಲಾಗಿದೆ.
ಈ ಪ್ರಕರಣದ ಬಗ್ಗೆ ಬಂಟ್ವಾಳ ವ್ಯಾಪ್ತಿಯಲ್ಲಿ ಹೆಚ್ಚುವರಿ ಅಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಿದ್ದು ಸೂಕ್ತ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.