HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಪಾಪೆಮಜಲು ಸರ್ಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ಸಭೆ

Puttur_Advt_NewsUnder_1
Puttur_Advt_NewsUnder_1


ಅರಿಯಡ್ಕ: ಪಾಪೆಮಜಲು ಸರ್ಕಾರಿ ಪ್ರೌಢಶಾಲೆಯಲ್ಲಿ ಜೂ.25 ರಂದು ಶಾಲಾ ಎಸ್‌ಡಿಎಂಸಿ ಸಭೆ ಶಾಸಕ ಸಂಜೀವ ಮಠಂದೂರುರವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಅರಿಯಡ್ಕ ಗ್ರಾಮಪಂಚಾಯತ್ ಅಧ್ಯಕ್ಷೆ ಸವಿತಾ ಎಸ್. ಅಮ್ಮಣ್ಣ ರೈ ಡಿ., ಪಾಪೆಮಜಲು ಗ್ರಾಮಪಂಚಾಯತ್ ಸದಸ್ಯರಾದ ತಿಲಕ್ ರೈ ಕುತ್ಯಾಡಿ ಹಾಗೂ ಸಂತೋಷ್ ಮಣಿಯಾಣಿ ಕುತ್ಯಾಡಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವೀನ್ ಭಂಡಾರಿ ಕುತ್ಯಾಡಿ ಮತ್ತು ಎಸ್‌ಡಿಎಂಸಿ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ: ಸಂಸ್ಥೆ ಯಲ್ಲಿ ಅಕ್ಷರ ದಾಸೋಹದ ಮುಖ್ಯ ಅಡುಗೆ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದುಕೊಂಡಿರುವ ಹೇಮಾವತಿ ಪಾದೆಲಾಡಿಯವರನ್ನು ಸನ್ಮಾನಿಸಲಾಯಿತು. ಶಿಕ್ಷಕ ಪ್ರಕಾಶ್ ಮೂಡಿತ್ತಾಯ ಸನ್ಮಾನಿತರ ಕಿರುಪರಿಚಯ ಮಾಡಿದರು ಈ ಸಂದರ್ಭದಲ್ಲಿ ನೂತನ ಎಸ್‌ಡಿಎಂಸಿ ಸದಸ್ಯರಿಗೆ ಶಾಸಕರು ಹೂ ನೀಡಿ ಸ್ವಾಗತಿಸಿದರು. ಮಕ್ಕಳ ಪೋಷಕರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಊರಿನ ಗಣ್ಯರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಮೋನಪ್ಪ ಪೂಜಾರಿ ಸ್ವಾಗತಿಸಿ, ದೈ.ಶಿ. ಶಿಕ್ಷಕಿ ಪ್ರವೀಣ ರೈ ವಂದಿಸಿದರು. ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.