ನೆಲ್ಯಾಡಿ: ಸೂರ್ಯನಗರದಲ್ಲಿರುವ ಶ್ರೀರಾಮ ವಿದ್ಯಾಲಯದಲ್ಲಿ ಪೋಷಕರ ಸಭೆ ಜೂ.24 ರಂದು ನಡೆಯಿತು. ಮುಖ್ಯ ಅತಿಥಿಯಾಗಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಶೈಕ್ಷಣಿಕ ಪರಿವೀಕ್ಷಕ ರಘುರಾಜ್ ಉಬರಡ್ಕರವರು ಮಾತನಾಡಿ, ಮಕ್ಕಳನ್ನು ಕೇವಲ ಅಂಕಗಳಿಗಾಗಿ ಬೆಳೆಸದೆ, ಜೀವನದ ಮೌಲ್ಯಗಳೊಂದಿಗೆ ಬೆಳೆಸಿ ಜೊತೆಗೆ ಸಂಸ್ಕೃತಿಯ ಪರಿಚಯ ಮಾಡಿ ಎಂದು ಹೇಳಿದರು.
ವೇದಿಕೆಯಲ್ಲಿ ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷ ಮಾಧವ ಗೌಡ ಕುಡ್ತಾಜೆ, ಉಪಾಧ್ಯಕ್ಷೆ ಶಶಿರೇಖಾ, ಆಡಳಿತ ಮಂಡಳಿಯ ಅಧ್ಯಕ್ಷ ರವಿಚಂದ್ರ ಹೊಸವಕ್ಲು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಗಣೇಶ್ ವಾಗ್ಲೆ ಸ್ವಾಗತಿಸಿ, ಆಡಳಿತ ಮಂಡಳಿಯ ಕಾರ್ಯದರ್ಶಿ ಬಾಲಕೃಷ್ಣ ಬಾಣಜಾಲು ವಂದಿಸಿದರು. ಶಿಕ್ಷಕ ಅನಿಲ್ ಅಕ್ಕಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.