HomePage_Banner
HomePage_Banner
HomePage_Banner

ಶ್ರೀ ರಾಮಕೃಷ್ಣ ಪ್ರೌಢ ಶಾಲಾ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಂದ ಯೋಗ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪುತ್ತೂರು ಇದರ ವತಿಯಿಂದ ಶ್ರೀ ರಾಮಕೃಷ್ಣ ಪ್ರೌಢ ಶಾಲೆ ಕೊಂಬೆಟ್ಟು ಇಲ್ಲಿ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಂದ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಸ್ಥಳೀಯ ಸಂಸ್ಥೆ ಪುತ್ತೂರು ಇದರ ಅಧ್ಯಕ್ಷರು ರೆವಡೆಂಟ್ ವಿಜಯ ಹಾರ್ವಿನ್ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷರು ಮಾತನಾಡಿ ಯೋಗ ಎಂಬುದು ಒಂದು ಸುಯೋಗ. ಮನುಷ್ಯನ ದೈಹಿಕ ಆರೋಗ್ಯದ ಜೊತೆಯಲ್ಲಿ ಮಾನಸಿಕ ನೆಮ್ಮದಿಯನ್ನು ಪಡೆಯಲು ಯೋಗವು ಒಂದು ಉತ್ತಮ ಸಾಧನ. ಮುಂದಿನ ಪ್ರಜೆಗಳಾದ ನೀವು ನಿಮ್ಮ ಜೀವನದಲ್ಲಿ ಇದನ್ನು ಅಳವಡಿಸಿಕೊಳ್ಳಿ ಎಂಬುದಾಗಿ ಹೇಳಿ ಮಕ್ಕಳಿಗೆ ಯೋಗ ದಿನದ ಶುಭವನ್ನು ಹಾರೈಸಿದರು.

ರಾಮಕೃಷ್ಣ ಪ್ರೌಢಶಾಲೆಯ ಮುಖ್ಯಗುರು ರೂಪಕಲಾ ಮೇಡಂ ಗೈಡ್ ಮತ್ತು ಸ್ಕೌಟ್ಸ್ ವಾರ್ಷಿಕ ಕ್ರಿಯಾ ಯೋಜನೆಯ ಪುಸ್ತಕವನ್ನು ಅನಾವರಣಗೊಳಿಸಿ ಯೋಗದ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು.

ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ವಿದ್ಯಾ ಆರ್ ಗೌರಿ ಅವರು ಈ ಕಾರ್ಯಕ್ರಮದ ಪ್ರಾಸ್ತಾವಿ ಕತೆಯನ್ನು ವಿಶೇಷ ರೀತಿಯಲ್ಲಿ ಮಕ್ಕಳಿಗೆ ಮನಮುಟ್ಟುವಂತೆ ಹೇಳಿ ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿದರು.

ಜಿಲ್ಲಾ ಸಂಸ್ಥೆಯ ರೋವರ್ ಲೀಡರ್ ಪ್ರಿತೇಶ ಮತ್ತು ಗೈಡ್ ಕ್ಯಾಪ್ಟನ್ ಮೇಬಲ್ ಡಿಸೋಜ ಇವರು ಮಕ್ಕಳಿಗೆ ಯೋಗ ದಿನಾಚರಣೆಯ ಶುಭವನ್ನು ಕೋರಿದರು.

ಸಂತ ಫಿಲೋಮಿನಾ ಕಾಲೇಜಿನ ರೋವರ್ಸ್ ಮತ್ತು ಯೋಗ ತರಬೇತುದಾರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಸ್ಕೌಟ್ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಎಲ್ಟಿ ಗೈಡ್ ಸುನೀತಾ ಅವರು ಧನ್ಯವಾದ ಸಮರ್ಪಣೆ ಮಾಡಿದರು. ಬಳಿಕ ಯೋಗ ತರಬೇತುದಾರರು ಮಕ್ಕಳಿಂದ ಯೋಗವನ್ನು ಮಾಡಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.