HomePage_Banner
HomePage_Banner
HomePage_Banner

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವನಮಹೋತ್ಸವ

Puttur_Advt_NewsUnder_1
Puttur_Advt_NewsUnder_1


ಸವಣೂರು : ಎಸ್.ಎನ್.ಆರ್ ರೂರಲ್ ಎಜುಕೇಶನಲ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವನಮಹೋತ್ಸವ ನಡೆಸಲಾಯಿತು.

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ವಿದ್ಯಾರಶ್ಮಿಯ ಆವರಣದಲ್ಲಿ ಈ ತನಕ ಸುಮಾರು 500ಕ್ಕೂ ಮಿಕ್ಕಿ ಗಿಡಗಳನ್ನು ನೆಟ್ಟಿದ್ದು ಇಂದು ಆವರಣದಲ್ಲಿ ಹಸಿರಾಗಿವೆ. ಪ್ರತಿಯೊಬ್ಬರೂ ವರ್ಷಕ್ಕೊಂದು ಗಿಡ ನೆಟ್ಟರೂ ಸದ್ಯೋಭವಿಷ್ಯದಲ್ಲಿ ಸುಂದರ ಹಸಿರು ಪರಿಸರವನ್ನು ಮರುಸ್ಥಾಪಿಸಲು ಸಾಧ್ಯ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ. ಎಚ್. ಮಾಧವ ಭಟ್ ಮಾತನಾಡಿ ಸತತವಾಗಿ ಪ್ರಕತಿಯ ಜೊತೆ ಒಡನಾಟದಿಂದಿರುವುದನ್ನು ನಾವಿಂದು ರೂಢಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಿಕೊಳ್ಳಿ ಎಂದರು.  ಬಳಿಕ ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟರು.

ಎಸ್.ಎನ್.ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್‌ನ ನಿರ್ದೇಶಕ ಎನ್. ಸುಂದರ ರೈ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಪ್ರದೀಪ್ ಕುಮಾರ್ ರೈ ಪನ್ನೆ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲ ಶೇಷಗಿರಿ ಎಂ.ಎಸ್., ವಿದ್ಯಾರಶ್ಮಿ ವಿದ್ಯಾಲಯದ ಉಪ ಪ್ರಾಂಶುಪಾಲೆ ಶಶಿಕಲಾ ಎನ್.ಜಿ., ವಿದ್ಯಾರ್ಥಿ ಕ್ಷೇಮಾಭಿವದ್ಧಿ ಅಧಿಕಾರಿ ಧನ್ಯಾ ಮತ್ತು ವಿದ್ಯಾರ್ಥಿ ಸರಕಾರದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಾಂಶುಪಾಲ ಸೀತಾರಾಮ ಕೇವಳ ಸ್ವಾಗತಿಸಿದರು.ಶಿಕ್ಷಕಿ ಉಮಾವತಿ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ಆಳ್ವ ಕಾರ್ಯಕ್ರಮ ನಿರ್ವಹಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.