ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ವತಿಯಿಂದ ಸಮಾಜ ಬಾಂಧವ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
2018-19ರ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ವಿಭಾಗದಲ್ಲಿ ಶೇ.95 ಮತ್ತು ಪಿಯುಸಿ ವಿಭಾಗದಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಜೂ. 30ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯುವ ಸಂಘದ ಮಹಾಸಭೆಯಲ್ಲಿ ಪುರಸ್ಕರಿಸಲಾಗುವುದು.
ಅರ್ಹ ವಿದ್ಯಾರ್ಥಿಗಳು ಸೂಕ್ತ ದಾಖಲೆಯೊಂದಿಗೆ ಜೂ.28ರ ಒಳಗೆ ಸಂಘದ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಗೌಡ ವಿದ್ಯಾರ್ಥಿ ಸಂಘದ ಸಂಚಾಲಕ ಡಾ. ಶ್ರೀಧರ್ ಗೌಡ ಪಾನತ್ತಿಲ ಅವರನ್ನು ಸಂಪರ್ಕಿಸಬೇಕೆಂದು ಸಂಘದ ಅಧ್ಯಕ್ಷ ಹೆಚ್.ಡಿ. ಶಿವರಾಮ್ ತಿಳಿಸಿದ್ದಾರೆ.