ಪುತ್ತೂರು: ಕೇರಳ ಗಡಿ ಭಾಗದಲ್ಲಿ ಅಕ್ರಮ ಗೋ ಸಾಗಟದ ವಾಹನವನ್ನು ತಡೆದ ವಿಚಾರದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಪೊಲೀಸರು ಸುಳ್ಳು ದರೋಡೆ ಪ್ರಕರಣ ದಾಖಲಿಸಿದ್ದಾರೆ. ಈ ನಿಟ್ಟಿನಲ್ಲಿ ಸುಳ್ಳು ಪ್ರಕರಣ ಹಿಂಪಡೆಯಬೇಕು. ಹಾಗೂ ಜಿಲ್ಲೆಯಾದ್ಯಂತ ಹಿಂದೂ ಸಂಘಟನೆಯ ಅಮಾಯಕ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗುತ್ತಿದೆ. ಇದು ಮುಂದುವರಿದಲ್ಲಿ ಹಿಂದೂ ಸಮಾಜ ಉಗ್ರ ಹೋರಾಟ ಮಾಡಲಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬಜರಂಗದಳ ಜಿಲ್ಲಾ ಸಂಚಾಲಕ ಶ್ರೀಧರ್ ತೆಂಕಿಲ, ವಿ.ಹಿಂ.ಪ ದ.ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ.ಎಸ್, ಮಾದವ ಪೂಜಾರಿ, ಹರೀಶ್ ಉಪಸ್ಥಿತರಿದ್ದರು.