ಕಡಬ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಿರಿಯ ಆರೋಗ್ಯ ಸಹಾಯಕಿಯಾಗಿದ್ದ ಕಡಬ ನಿವಾಸಿ ಸೂಸಮ್ಮ ಅಬ್ರಹಾಂರವರು ಸ್ವಯಂ ನಿವೃತ್ತಿ ಪಡೆದುಕೊಂಡಿದ್ದು ಅವರಿಗೆ ಬೀಳ್ಕೊಡುಗೆ ಸಮಾರಂಭವು ಮುಂಡಾಜೆ ಆರೋಗ್ಯ ಕೇಂದ್ರದಲ್ಲಿ ಇತ್ತೀಚೆಗೆ ನಡೆಯಿತು.
ಕೊಲ ಪ್ರಾಥಮಿಕ ಆರೋಗ್ಯ ಕೇಂದ್ರ, ಕಡಬ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿಯೂ ಸೂಸಮ್ಮರವರು ಸೇವೆ ಸಲ್ಲಿಸಿದ್ದರು. ಬೆಳ್ತಂಗಡಿ ತಾಲೂಕು ವೈದ್ಯಾಧಿಕಾರಿ ಡಾ. ಕಲಾಮಧುಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ವೈದ್ಯಾಧಿಕಾರಿ ಡಾ. ಕಾವ್ಯವೈಪನರವರು ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಿದರು. ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಸೂಸಮ್ಮರವರ ಪತಿ ಫಾ.ಪಿ.ಕೆ. ಅಬ್ರಹಾಂ, ಅಂಗನವಾಡಿ ಕಾರ್ಯಯರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.