ಪುತ್ತೂರು: ದೇಶದಲ್ಲಿ ಇದೇ ಮೊದಲ ಬಾರಿಗೆ ವಿಜ್ಞಾನ ಮತ್ತು ಕಲಾ ವಿಭಾಗದಲ್ಲಿ ಪ್ರಾರಂಭವಾದ ತತ್ವ ಶಾಸ್ತ್ರ ವಿಷಯದ ಅಧ್ಯಯನಕ್ಕೆ ಬಪ್ಪಳಿಗೆ ಅಂಬಿಕಾ ಮಹಾ ವಿದ್ಯಾಲಯದಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಮೂರು ವರ್ಷಗಳ ಈ ಶಿಕ್ಷಣ ಸಂಪೂರ್ಣ ಉಚಿತವಾಗಿರುತ್ತದೆ. ಎಲ್ಲಾ ವಯೋಮಾನದವರಿಗೆ ಅವಕಾಶವಿದೆ ಎಂದು ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಪತ್ತಿಕಾಗೋಷ್ಠಿಯಲ್ಲಿ ಹೇಳಿದರು. ಪ್ರಾಂಶುಪಾಲೆ ರಾಜಶ್ರೀ ನಟ್ಟೋಜ, ಆಡಳಿತ ಮಂಡಳಿ ಸದಸ್ಯರಾದ ಸುರೇಶ್ ಶೆಟ್ಟಿ, ಪ್ರಸನ್ನ ಭಟ್ ಉಪಸ್ಥಿತರಿದ್ದರು.