ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ, ಜಿಲ್ಲಾ ಪಂಚಾಯತ್ , ಸ್ವಚ್ಛ ಭಾರತ್ ಮಿಷನ್, ತಾಲೂಕು ಪಂಚಾಯತ್ ಮತ್ತು ಅರಿಯಡ್ಕ ಗ್ರಾಮ ಪಂಚಾಯತ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛ ಮೇವ ಜಯತೆ ಆಂದೋಲನ ಕಾರ್ಯಕ್ರಮ ಜೂ. 27 ರಂದು ನನ್ಯ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಪ್ರತಿಮಾರವರು ಸಭಾಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷ ಲೋಕೇಶ್ ಚಾಕೋಟೆಯವರು ಸ್ವಚ್ಛ ಮೇವ ಜಯತೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.ಕಿರಿಯ ಆರೋಗ್ಯ ಕಾರ್ಯಕರ್ತೆ ನವ್ಯರವರು ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಗ್ರಾಪಂ ಕಾರ್ಯದರ್ಶಿ ಕೃಷ್ಣರಾಜ್, ಸದಸ್ಯರುಗಳಾದ ಸೀತಾರಾಮ ಮೇಲ್ಪಾದೆ, ಹೊನ್ನಪ್ಪ ಪೂಜಾರಿ, ಶಾಲಾ ಮುಖ್ಯ ಶಿಕ್ಷಕಿ ನಾಗವೇಣಿ, ಶಿಕ್ಷಕಿ ಮಮತಾ, ಆಶಾ ಕಾರ್ಯಕರ್ತೆ ಉಷಾ ಡಿ.ಎಂ,ಅಂಗನವಾಡಿ ಕಾರ್ಯಕರ್ತೆ ಸೀತಾರತ್ನ ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದ್ದರು. ಸಭಾ ಕಾರ್ಯಕ್ರಮದ ಬಳಿಕ ಶಾಲಾ ಆವರಣದಲ್ಲಿ ಉಪಾಧ್ಯಕ್ಷ ಲೋಕೇಶ್ ಚಾಕೋಟೆಯವರು ಗಿಡ ನೆಟ್ಟರು.