ಪುತ್ತೂರು: ಸುದ್ದಿ ಮಾಹಿತಿ ಟ್ರಸ್ಟ್ ನೇತೃತ್ವದಲ್ಲಿ ಸುಳ್ಯ ತಾಲೂಕು ಪಂಚಾಯತ್ ಮತ್ತು ತಾಲೂಕು ಆಡಳಿತ ಸುಳ್ಯ ಸಹಯೋಗದಲ್ಲಿ ಮಳೆ ಕೊಯ್ಲು ಮಾಹಿತಿ ಕಾರ್ಯಕ್ರಮ ಜೂ. 28 ರಂದು ಸುಳ್ಯ ತಾ.ಪಂ. ಪಯಸ್ವಿನಿ ಸಭಾಂಗಣದಲ್ಲಿ ನಡೆಯಿತು.
ಸುದ್ದಿ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದರವರು ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಪುತ್ತೂರು ಉಪವಿಭಾಗಾಧಿಕಾರಿ ಎಚ್ ಕೆ ಕೃಷ್ಣಮೂರ್ತಿ ಮಳೆಕೊಯ್ಲು ಆಂದೋಲನಕ್ಕೆ ಚಾಲನೆ ನೀಡಿದರು. ಸುಳ್ಯ ತಹಶೀಲ್ದಾರ್ ಕುಂಞಿ ಅಹಮ್ಮದ್, ಸುಳ್ಯ ತಾ.ಪಂ. ಉಪಾಧ್ಯಕ್ಷೆ ಶುಭದ ರೈ, ತಾ.ಪಂ. ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಉಪಸ್ಥಿತರಿದ್ದರು.
ಸುಳ್ಯ ಸುದ್ದಿ ಬಿಡುಗಡೆ ಪ್ರಧಾನ ವರದಿಗಾರ ಹರೀಶ್ ಬಂಟ್ವಾಳ್ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ವರದಿಗಾರ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಧುಶ್ರೀ ಪ್ರಾರ್ಥಿಸಿದರು. ಜನಪ್ರತಿನಿಧಿಗಳು, ಪಿಡಿಒ ಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.