Breaking News

ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಗೋ ಸಾಗಾಟಗಾರರ ಮೇಲೆ ಹಲ್ಲೆ ಆರೋಪ: ನಾಲ್ವರ ಬಂಧನ

ಉಪ್ಪಿನಂಗಡಿ: ಅಕ್ರಮ ಗೋ ಸಾಗಾಟಕ್ಕೆ ಸಂಬಂಧಿಸಿ ಇಬ್ಬರನ್ನು ಹಾಗೂ ಅಕ್ರಮ ಗೋ ಸಾಗಾಟಗಾರರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ನಾಲ್ವರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಜೂ.28 ರಂದು ರಾತ್ರಿ ಮೊಗ್ರುವಿನಲ್ಲಿ ನಡೆದಿದೆ.

ಅಕ್ರಮ ಗೋ ಸಾಗಾಟಕ್ಕೆ ಸಂಬಂಧಿಸಿ ಫಿಕಾಪ್ ವಾಹನ ಚಾಲಕ ಬೆಳಾಲು ನಿವಾಸಿ ಹೊನ್ನಪ್ಪ ಗೌಡ (55), ಮೊಗ್ರು ಗ್ರಾಮದ ಮಾಪಲ ಮನೆಯ ಉಸ್ಮಾನ್ (60) ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದು, ಅಕ್ರಮ ಗೋ ಸಾಗಾಟಗಾರರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರೆನ್ನಲಾದ ಬಂದಾರು ಗ್ರಾಮದ ಮೈರೋಲ್ತಡ್ಕ ನಿವಾಸಿ ಸಂತೋಷ್ ಪೂಜಾರಿ (30), ಕಣಿಯೂರು ಗ್ರಾಮದ ಧನರಾಜ್ (21), ಕಣಿಯೂರು ಗ್ರಾಮದ ಪದ್ಮುಂಜ ನಿವಾಸಿ ಲತೀಶ (20) ಹಾಗೂ ಕಣಿಯೂರು ಗ್ರಾಮದ ಮೋರ್ಜಾಲು ನಿವಾಸಿ ಶರತ್ (19) ಎಂಬವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡು ಎತ್ತು ಹಾಗೂ ಒಂದು ದನ ಸೇರಿದಂತೆ ಸಾಗಾಟಕ್ಕೆ ಬಳಸಿದ ಪಿಕಾಪ್ ವಾಹನವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಘಟನೆಯ ವಿವರ: ಕದ್ದು ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಗುರುವಾರ ರಾತ್ರಿ ಮೊಗ್ರು ಜಂಕ್ಷನ್‌ನಲ್ಲಿ ಪಿಕಾಪ್ ವಾಹನವೊಂದನ್ನು ತಡೆದು ನಿಲ್ಲಿಸಿದ್ದರು. ಈ ಬಗ್ಗೆ ಮಾಹಿತಿ ತಿಳಿದು ತಕ್ಷಣವೇ ಉಪ್ಪಿನಂಗಡಿ ಪೊಲೀಸರು ಅಲ್ಲಿಗೆ ಧಾವಿಸಿದ್ದು, ಅಕ್ರಮ ಗೋ ಸಾಗಾಟಗಾರರನ್ನು ವಶಕ್ಕೆ ತೆಗೆದುಕೊಂಡರು. ಅಲ್ಲದೆ, ಗೋ ಸಾಗಾಟಗಾರರಿಗೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ನಾಲ್ವರು ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನೂ ವಶಕ್ಕೆ ಪಡೆದರಲ್ಲದೆ, ಘಟನಾ ಸ್ಥಳದಲ್ಲಿದ್ದ ಬೈಕ್‌ಗಳನ್ನು ವಶಕ್ಕೆ ತೆಗೆದುಕೊಂಡು ಠಾಣೆಗೆ ತಂದರು.

ಹಿಂದೂಪರ ಸಂಘಟನೆ ಕಾರ್ಯಕರ್ತರ ಜಮಾವಣೆ: ಅಕ್ರಮ ಗೋ ಸಾಗಾಟಗಾರರನ್ನು ತಡೆದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆಯೂ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಸುಮಾರು 200ರಷ್ಟು ಕಾರ್ಯಕರ್ತರು ತಡರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದರು. ಬಳಿಕ ಸ್ಥಳಕ್ಕೆ ಶಾಸಕ ಹರೀಶ್ ಪೂಂಜಾ, ನ್ಯಾಯವಾದಿ ಸುಬ್ರಹ್ಮಣ್ಯ ಅಗರ್ತ ಸೇರಿದಂತೆ ಹಿಂದೂಪರ ಸಂಘಟನೆಗಳ ಪ್ರಮುಖರು ಠಾಣೆಗೆ ಆಗಮಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸದೇ ಬಿಡುವಂತೆ ಪಟ್ಟು ಹಿಡಿದರು. ಆದರೆ ಒತ್ತಡಕ್ಕೆ ಮಣಿಯದ ಪೊಲೀಸರು ಅಕ್ರಮ ಗೋ ಸಾಗಾಟಗಾರರು ಹಾಗೂ ಗೋ ರಕ್ಷಕರ ಮೇಲೆಯೂ ಪ್ರಕರಣ ದಾಖಲಿಸಿಕೊಂಡರು. ಕಾನೂನಾತ್ಮಕ ಪ್ರಕ್ರಿಯೆಗಳ ಬಳಿಕ ಆರೋಪಿಗಳನ್ನು ಬಿಡುವುದಾಗಿ ಹಿಂದೂಪರ ಸಂಘಟನೆಗಳ ಮುಖಂಡರಿಗೆ ಭರವಸೆ ನೀಡಿದರು. ಬಳಿಕ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಬಳಿಯಿಂದ ತೆರಳಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿ ಜಮಾವಣೆಗೊಂಡರು. ರಾತ್ರಿ 1 ಗಂಟೆಯಾದರೂ ಆರೋಪಿಗಳನ್ನು ಬಿಡದಿದ್ದಾಗ ಮತ್ತೆ ಠಾಣೆಯ ಮುಂದೆ ಜಮಾಯಿಸಿ, ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ ಠಾಣೆಯ ಮೆಟ್ಟಿಲಿನ ಮೇಲೆ ಧರಣಿ ಕೂತರು. ಕಾನೂನಾತ್ಮಕ ಪ್ರಕ್ರಿಯೆಗಳೆಲ್ಲಾ ಮುಗಿದ ಬಳಿಕ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರನ್ನು ಉಪ್ಪಿನಂಗಡಿ ಪೊಲೀಸರು ಜಾಮೀನಿನ ಮೂಲಕ ಬಿಡುಗಡೆಗೊಳಿಸಿ ಕಳುಹಿಸಿದರು.

ಉದ್ವಿಗ್ನ ಸ್ಥಿತಿ: ಒಂದೆಡೆ ಠಾಣೆಯ ಮುಂದೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಜಮಾಯಿಸುತ್ತಿದ್ದರೆ, ಇನ್ನೊಂದೆಡೆ ಪೇಟೆಯಲ್ಲಿ ಮುಸ್ಲಿಂ ಪರ ಸಂಘಟನೆಗಳ ಕಾರ್ಯಕರ್ತರೂ ಜಮಾಯಿಸತೊಡಗಿದರು. ಅಕ್ರಮ ಗೋ ಸಾಗಾಟಗಾರರ ಪರವಾಗಿಯೂ ನಿಯೋಗವೊಂದು ಪೊಲೀಸ್ ಠಾಣೆಗೆ ತೆರಳಿ ಮಾತುಕತೆ ನಡೆಸಿತು. ಉಭಯ ಸಮುದಾಯಗಳ ಕಾರ್ಯಕರ್ತರು ಜಮಾಯಿಸಿದ್ದರೂ, ಯಾರ ಒತ್ತಡಕ್ಕೂ ಮಣಿಯದೇ ಆರೋಪಿಗಳ ಮೇಲೆ ಕಾನೂನಾತ್ಮಕ ಪ್ರಕ್ರಿಯೆ ಜರಗಿಸಿದ ಪುತ್ತೂರು ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ನಂದಕುಮಾರ್ ಅವರ ದಿಟ್ಟ ನಡೆಯಿಂದಾಗಿ ಉದ್ವಿಗ್ನ ಸ್ಥಿತಿಯಿದ್ದರೂ ಯಾವುದೇ ಅಹಿತಕರ ಘಟನೆಗೆ ಆಸ್ಪದವಾಗಲಿಲ್ಲ.

ಜಾನುವಾರುಗಳನ್ನು ಕದ್ದು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದ್ದು, ಇವರು ಈ ಜಾನುವಾರುಗಳು ಕದ್ದದ್ದಲ್ಲ ಎಂಬ ದಾಖಲೆ ತೋರಿಸಿದ್ದರೆ ಅವರಿಗೂ ಠಾಣೆಯಲ್ಲೇ ಜಾಮೀನು ಮಂಜೂರು ಮಾಡಬಹುದಿತ್ತು. ಆದರೆ ಇವರು ಅದನ್ನು ಇನ್ನೂ ತೋರಿಸಿಲ್ಲ. ಆದ್ದರಿಂದ ಅವರು ನಮ್ಮ ವಶದಲ್ಲಿದ್ದಾರೆ ಎಂದು ಉಪ್ಪಿನಂಗಡಿ ಠಾಣಾಧಿಕಾರಿ ನಂದಕುಮಾರ್ ಪತ್ರಿಕೆಗೆ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.