Home_Page_Advt
Home_Page_Advt
Home_Page_Advt

ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಈಶ್ವರ ಭಟ್ ಪಂಜಿಗುಡ್ಡೆ ಅವಿರೋಧ ಆಯ್ಕೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದ ಮುರಳೀಧರ ರೈ ಪಡೀಲು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಅಧ್ಯಕ್ಷ ಆಯ್ಕೆಯಲ್ಲಿ ಹಾಲಿ ಉಪಾಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಒಟ್ಟು 11 ನಿರ್ದೇಶಕ ಸ್ಥಾನಗಳನ್ನು ಹೊಂದಿರುವ ಸಹಕಾರಿ ಸಂಘದಲ್ಲಿ ಕಾಂಗ್ರೆಸ್ ಬೆಂಬಲಿತ 5 ಮಂದಿ, 4 ಮಂದಿ ಬಿಜೆಪಿ ಮತ್ತು 1 ಜೆಡಿಎಸ್ ಬೆಂಬಲಿತ ನಿರ್ದೇಶಕ ಸ್ಥಾನಗಳನ್ನು ಹೊಂದಿದೆ. ಅಲ್ಲದೆ ಒಂದು ಸ್ಥಾನ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮೇಲ್ವಿಚಾರಕರನ್ನು ಒಳಗೊಂಡಿದೆ.

ಈ ಅವಧಿಯಲ್ಲಿ ಸಂಘದ ಅಧ್ಯಕ್ಷರಾಗಿದ್ದ ಮುರಳೀಧರ ರೈಯವರು ಕೆಲ ಸಮಯಗಳ ಹಿಂದೆ ನಿಧನರಾಗಿದ್ದು ಅವರಿಂದ ತೆರವಾದ ಸ್ಥಾನಕ್ಕೆ ಅಧ್ಯಕ್ಷರ ಆಯ್ಕೆಗೆ ಚುನಾವಣೆಯು ಜೂ.28ರಂದು ನಡೆದಿದೆ. ಅಧ್ಯಕ್ಷರ ಆಯ್ಕೆಗೆ ಚುನಾವಣೆಗೆ ಉಪಾಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಭಾಶ್ ನಾಯಕ್ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಭಾಶ್ ನಾಯಕ್ ನಾಮಪತ್ರ ಹಿಂತೆಗೆದುಕೊಂಡಿದ್ದು ಈಶ್ವರ  ಭಟ್ ಪಂಜಿಗುಡ್ಡೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾದ ರಾಜಶೇಖರ ಜೈನ್ ಸೂಚಕರಾಗಿ, ಜಯಲಕ್ಷ್ಮೀ ಸುರೇಶ್ ಅನುಮೋದಿಸಿದ್ದರು. ಸಹಕಾರಿ ಸಂಘಗಳ ಸಹಾಯಕ ನಿಬಂಧಕರ ಕಛೇರಿಯ ಮಾರಾಟಾಧಿಕಾರಿ ಶೋಭಾ ಚುನಾವಣಾಧಿಕಾರಿಯಾಗಿದ್ದರು. ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಹಾಗೂ ಸಿಬಂದಿಗಳು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.