ಪುತ್ತೂರು: ಗೋವುಗಳನ್ನು ಅಕ್ರಮಸಾಗಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳದೆ, ಗೋ ರಕ್ಷಣೆಯಲ್ಲಿ ನಿರತರಾಗಿರುವ ಅಮಾಯಕ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸುವ ಹಾಗೂ ಗೋವುಗಳ ರಕ್ಷಣೆಯಲ್ಲಿ ಸರಕಾರದ ವೈಫಲ್ಯವನ್ನು ಖಂಡಿಸಿ ಜು.3ಕ್ಕೆ ಜಿಲ್ಲೆಯಾದ್ಯಂತ ಪ್ರತಿ ತಾಲೂಕು ಕೇಂದ್ರಗಳಲ್ಲಿ ಹಿಂದೂ ಸಂಘಟನೆಯ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ ನಡೆಯಲಿದೆ.
ಜೂ.28ರಂದು ಮಂಗಳೂರಿನಲ್ಲಿ ನಡೆದ ಸಂಘ ಪರಿವಾರ ಹಿರಿಯರ ಸಮ್ಮುಖದಲ್ಲಿ ನಡೆದ ಬೈಠೆಕ್ನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ವಿಶ್ವಹಿಂದೂ ಪರಿಷದ್, ಬಜರಂಗದಳ, ಹಿಂದೂ ಜಾಗರಣಾ ವೇದಿಕೆ ಪ್ರಮುಖರು ಬೈಠೆಕ್ನಲ್ಲಿ ಭಾಗವಹಿಸಿದ್ದರು. ಜು. 3ರಂದು ಪುತ್ತೂರಿನಲ್ಲಿ ಮಿನಿ ವಿಧಾನ ಸೌಧದ ಬಳಿ ಹಿಂದೂ ಜಾಗರಣಾ ವೇದಿಕೆ, ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿಲದೆ ಎಂದು ತಿಳಿದು ಬಂದಿದೆ.