ಪುತ್ತೂರು: ನೆಲ್ಲಿಕಟ್ಟೆ ಶಿವರಾಮ ಕಾರಂ ತ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ, ಬೋರ್ವೆಲ್ ಉದ್ಘಾಟನೆ, ವನಮಹೋತ್ಸವ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮಗಳು ಜೂ.28ರಂದು ನಡೆಯಿತು.
ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ.ಗೋಪಿನಾಥ ಪೈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ದೈಹಿಕ ಶಿಕ್ಷಕ ಪರಿವೀಕ್ಷಕ ಸುಂದರ ಗೌಡ, ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಸುರೇಂದ್ರ ಕಿಣಿ, ತಾ.ಪಂ ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ಇಂದುಶೇಖರ್ ಉಪಸ್ಥಿತರಿದ್ದರು. ಶಾಲಾ ಅಭಿವೃದ್ಧಿಯಲ್ಲಿ ಸಹಕರಿಸಿದ ಡಾ.ಗೋಪಿನಾಥ ಪೈಯವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.