Home_Page_Advt
Home_Page_Advt
Home_Page_Advt

ಗೋಕಳ್ಳತನ, ಅಕ್ರಮ ಗೋಸಾಗಾಟ, ಗೋಹತ್ಯೆ ವಿರುದ್ಧ ಬಿ.ಜೆ.ಪಿ ನಿಯೋಗದಿಂದ ಜಿಲ್ಲಾಧಿಕಾರಿಗೆ ಮನವಿ

Puttur_Advt_NewsUnder_1
Puttur_Advt_NewsUnder_1
  • ಗೋಹತ್ಯೆ ನಿಲ್ಲಿಸಿ
  • ಗೋಕಳ್ಳತನನಿಲ್ಲಿಸಿ

 

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಗೋಕಳ್ಳತನ, ಅಕ್ರಮ ಗೋಸಾಗಾಟ, ಗೋಹತ್ಯೆ ಜಿಲ್ಲೆಯ ಕೃಷಿ ಮತ್ತು ಹೈನುಗಾರಿಕೆಯ ಜೊತೆಗೆ ಸಾಮಾಜಿಕ ಸಾಮರಸ್ಯವನ್ನು ಹದಗೆಡಿಸುತ್ತಿದ್ದು ಇದನ್ನು ನಿಲ್ಲಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೂಡ ಉಪಸ್ಥಿತರಿದ್ದರು. ಮನವಿಯಲ್ಲಿ ಜಿಲ್ಲಾಡಳಿತ ತಕ್ಷಣ ತೆಗೆದುಕೊಳ್ಳಬೇಕಾದ ಇಪ್ಪತ್ತು ಬೇಡಿಕೆಗಳನ್ನು  ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಲಾಯಿತು.
ಭಾರತೀಯ ಜನತಾ ಪಾರ್ಟಿಯ ನಿಯೋಗದಲ್ಲಿ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್, ಕು. ಶೋಭಾ ಕರಂದ್ಲಾಜೆ, ಶಾಸಕರಾದ ಶ್ರೀ ಅಂಗಾರ, ಶ್ರೀ ಸಂಜೀವ ಮಠಂದೂರು, ಶ್ರೀ ರಾಜೇಶ್ ನಾಯ್ಕ್, ಶ್ರೀ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ , ವಿವಿಧ ಹಿಂದೂ ಸಂಘಟನೆಗಳ ಪಧಾದಿಕಾರಿಗಳದ ಶ್ರೀ ಶರಣ್ ಪಂಪ್ವೆಲ್, ಶ್ರೀ ಜಗದೀಶ್ ಶೇಣವ ಹಾಗೂ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡದ ಪಧಾದಿಕಾರಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.