- ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ
ಪುತ್ತೂರು: ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳು ಮತ್ತು ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಜೂ.29ರಂದು ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ನಡೆಯಿತು. ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಅವರು ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಜಿ.ಪಂ ಸದಸ್ಯ ಎಮ್.ಎಸ್. ಮಹಮ್ಮದ್, ಜಿ.ಪಂ ಸ್ಥಾಯಿ ಸಮಿತಿ ಸದಸ್ಯೆ ಮಂಜುಳಾ ಮಾವೆ, ತಾ.ಪಂ ಸದಸ್ಯ ಸಾಜ ರಾಧಾಕ್ರಷ್ಣ ಆಳ್ವ, ಸಂಸ್ಥೆಯ ಸಂಚಾಲಕರು, ಸೇರಿದಂತೆ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು. ಉಪನಿರ್ದೆಶಕ ವೈ ಶಿವರಾಮಯ್ಯ ಸ್ವಾಗತಿಸಿದರು.