ಪುತ್ತೂರು: ಚಿನ್ನ ಕಳ್ಳತನದ ಆರೋಪದ ಹಿನ್ನಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಗೆ ದೌರ್ಜನ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿ ಮೂವರು ಪೊಲೀಸರನ್ನು ಆಮಾನತು ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ತಿಳಿಸಿದ್ದಾರೆ.
ಸಂಪ್ಯ ಪೊಲೀಸ್ ಠಾಣೆಯ ಮಹಿಳಾ ಸಿಬಂದಿಗಳಾದ ಗಾಯತ್ರಿ ಮತ್ತು ಪ್ರಶ್ನಿತಾ ಹಾಗೂ ಪೊಲೀಸ್ ದಿನೇಶ್ ಅವರನ್ನು ಅಮಾನತು ಮಾಡಲಾಗಿದೆ.