ನಿಡ್ಪಳ್ಳಿ: ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆ, ಶ್ರೀ ಶಾಂತಾದುರ್ಗಾ ದೇವಸ್ಥಾನ ಹಾಗೂ ಸಂಘಸಂಸ್ಥೆಗಳ ಆಶ್ರಯದಲ್ಲಿ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ ಜು.2 ರಂದು ನಿಡ್ಪಳ್ಳಿ ದೇವಾಲಯದ ವಠಾರದಲ್ಲಿ ಬೆಳಿಗ್ಗೆ ಗಂಟೆ 10 ರಿಂದ ನಡೆಯಲಿದೆ.
ಕಾರ್ಯಕ್ರಮವನ್ನು ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ಬಿ.ಜಿ ಉದ್ಘಾಟಿಸಲಿದ್ದಾರೆ. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ನಾಗೇಶ ಗೌಡ ಅಧ್ಯಕ್ಷತೆ ವಹಿಸಲಿದ್ದು ಪ್ರಿಯದರ್ಶಿನಿ ಶಾಲಾ ಅಧ್ಯಕ್ಷ ರಂಗನಾಥ ರೈ ಗುತ್ತು, ಪ್ರಗತಿಪರ ಕೃಷಿಕರಾದ ಶ್ರೀನಿವಾಸ ಭಟ್ ವಾಲ್ತಾಜೆ, ವೆಂಕಟ್ರಮಣ ಬೋರ್ಕರ್, ತಿಮ್ಮಣ್ಣ ರೈ ಆನಾಜೆ, ಸತ್ಯನಾರಾಯಣ ರೈ ನುಳಿಯಾಲು, ಜೈಯುವಶಕ್ತಿ ಯುವಕ ಮಂಡಲದ ಅಧ್ಯಕ್ಷ ಸಂತೋಷ ಕುಮಾರ್ ಕಾನ, ಶ್ರೀ ಶಾಂತಾದುರ್ಗಾ ಸ್ಪೊರ್ಟ್ಸ್ ಕ್ಲಬ್ ಅಧ್ಯಕ್ಷ ಸತ್ಯನಾರಾಯಣ ಮಣಿಯಾಣಿ ಬೊಳುಂಬುಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಪ್ರಿಯದರ್ಶಿನಿ ವಿದ್ಯಾಸಂಸ್ಥೆ ಮುಖ್ಯ ಗುರು ರಾಜೇಶ್ ನೆಲ್ಲಿತ್ತಡ್ಕ ತಿಳಿಸಿದ್ದಾರೆ.