ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಸುಕನ್ಯ ಡಿ.ಎನ್ರವರು ಚಿಕ್ಕಬಳ್ಳಾಪುರ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿಯಾಗಿ ವರ್ಗಾವಣೆಗೊಂಡಿರುತ್ತಾರೆ.
ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಹಿರಿಯ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಕನ್ಯರವರು 2017ರಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಪುತ್ತೂರಿಗೆ ವರ್ಗಾವಣೆಗೊಂಡಿದ್ದರು. ಸುಮಾರು ಎರಡು ವರ್ಷಗಳ ಕರ್ತವ್ಯ ನಿರ್ವಹಿಸಿದ ಅವರನ್ನು ಹಿರಿಯ ಉಪನ್ಯಾಸಕರಾಗಿ ಉಡುಪಿಗೆ ವರ್ಗಾವಣೆಗೊಳಿಸಿ ಆದೇಶಗೊಳಿಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಕೆಐಟಿಯಿಂದ ತಡೆಯಾಜ್ಞೆ ತಂದಿದ್ದರು. ಇದೀಗ ವರ್ಗಾವಣೆ ಆದೇಶದಲ್ಲಿ ಮಾರ್ಪಾಡು ಮಾಡಲಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಉಪಯೋಜನಾ ಸಮನ್ವಯಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶಮಾಡಲಾಗಿದೆ.
ಶಾಲೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೇರವಾಗಿ ತರಗತಿ ಹೋಗಿ ವಿದ್ಯಾರ್ಥಿಗಳ ನೋಟ್ ಪುಸ್ತಕಗಳನ್ನು ಪರಿಶೀಲನೆ ನಡೆಸುವ ಮೂಲಕ ಬೋಧನಾ ಕ್ರಮಗಳ ಬಗ್ಗೆ ನಿಗಾ ವಹಿಸುತ್ತಿದ್ದರು. ಅಲ್ಲದೆ ಶಾಲಾ ಅವಧಿಯಲ್ಲಿ ಶಿಕ್ಷಕರು ಕಛೇರಿಗೆ ಭೇಟಿ ನೀಡುವುದನ್ನು ನಿಯಂತ್ರಿಸುವ ಮೂಲಕ ಸಾರ್ವಜನಿಕರಿಂದ ಹೆಗ್ಗಳಿಕೆ ಪಾತ್ರರಾಗಿದ್ದರು.
ವಿಷ್ಣುಪ್ರಸಾದ್ಗೆ ಜಾರ್ಜ್:
ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯ ಡಿ.ಎನ್ರವರು ಚಿಕ್ಕಬಳ್ಳಾಪುರ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿಯಾಗಿ ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಕೋಡಿಂಬಾಡಿ ಶಾಂತಿನಗರ ಸರಕಾರಿ ಪ್ರೌಢಶಾಲಾ ಮುಖ್ಯಗುರು ವಿಷ್ಣುಪ್ರಸಾದ್ರವರು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.