ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾ ಸಂಸ್ಥೆಯ 2019-20ನೇ ಶೈಕ್ಷಣಿಕ ಸಾಲಿನ ಪಾಲಕರ ಸಭೆ ಜೂನ್ 29ರಂದು ಜರಗಿತು.
ವಿದ್ಯಾ ಸಂಸ್ಥೆಯ ಅಧ್ಯಕ್ಷ ಯು.ಎಸ್.ಎ. ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಸ್ಥೆಯು ಬೆಳೆದು ಬಂದ ಹಾದಿಯ ಬಗ್ಗೆ ಹಾಗೂ ಮುಂದಿನ ದಿನಗಳಲ್ಲಿ ಅಳವಡಿಸಿಕೊಳ್ಳುವ ಪರಿಣಾಮಕಾರಿ ಶೈಕ್ಷಣಿಕ ಚಟುವಟಿಕೆ, ಯೋಜನೆಗಳ ಬಗ್ಗೆ ಪಾಲಕರೊಂದಿಗೆ ಮುಕ್ತವಾಗಿ ವಿಚಾರ ವಿನಿಮಯ ಮಾಡಿಕೊಂಡರು.
ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಹೆಚ್. ಕೆ. ಪ್ರಕಾಶ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಸೂಕ್ತ ನಿದರ್ಶನಗಳೊಂದಿಗೆ ವಿವರಿಸಿದರು. ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕಿ ವಸಂತಿ ನಾಯಕ್ ಉಪಸ್ಥಿತರಿದ್ದರು.
ಸಂಸ್ಥೆಯ ಹಿರಿಯ ಶಿಕ್ಷಕಿ ಎವ್ಲಿನ್ಪಾಯಸ್ ಸ್ವಾಗತಿಸಿ, ವಿದ್ಯಾಲಯದ ಪ್ರಾಚಾರ್ಯ ಜೋಸ್ ಎಂ. ಜೆ. ವಂದಿಸಿದರು. ಶಿಕ್ಷಕಿ ಸುಪ್ರಿಯಾ ಕಾಯಕ್ರಮ ನಿರೂಪಿಸಿದರು.