ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ, ಜಿಲ್ಲಾ ಪಂಚಾಯತ್, ಸ್ವಚ್ಚ ಬಾರತ್ ಮಿಷನ್, ತಾಲೂಕು ಪಂಚಾಯತ್ ಪುತ್ತೂರು ಮತ್ತು ಅರಿಯಡ್ಕ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಸ್ವಚ್ಚಮೇವ ಜಯತೇ ಕಾರ್ಯಕ್ರಮದ ಸಮಾರೋಪ ಸಮಾರಂಭ ಜೂ.30ರಂದು ಕಾವು ಸುವರ್ಣ ಗ್ರಾಮೋದಯ ಸಮುದಾಯ ಭವನದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ಎಸ್. ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ತಾ.ಪಂ.ಸದಸ್ಯ ರಾಮ ಪಾಂಬಾರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಎಸ್. ಅರಿಯಡ್ಕ ಗ್ರಾ.ಪಂ.ಉಪಾಧ್ಯಕ್ಷ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಪೂರ್ಣಾತ್ಮರಾಮ್ ಈಶ್ವರಮಂಗಲ ರವರು ಭಾಗವಹಿಸಿದರು.