ರಾಮಕುಂಜ ಆ.ಮಾ.ಶಾಲೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಎಸ್‌ಎಲ್‌ಸಿಯಲ್ಲಿ 500ಕ್ಕಿಂತ ಹೆಚ್ಚು ಅಂಕಗಳಿಸಿದ 81 ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ

ರಾಮಕುಂಜ: ಇಲ್ಲಿನ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಠ ಸಾಧನೆ ಮಾಡಿದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜೂ.30ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

೨೦೧೮-೧೯ನೇ ಸಾಲಿನಲ್ಲಿ ಸಂಸ್ಥೆಯಲ್ಲಿ ೧೩೪ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.೧೦೦ ಫಲಿತಾಂಶ ಬಂದಿತ್ತು. ಈ ಪೈಕಿ ಸುಮಾರು ೮೧ ವಿದ್ಯಾರ್ಥಿಗಳು ೫೦೦ಕ್ಕಿಂತ ಹೆಚ್ಚು ಅಂಕ ಪಡೆದುಕೊಂಡು ತೇರ್ಗಡೆಗೊಂಡಿದ್ದರು. ಈ ೮೧ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ನಗದು ನೀಡಿ ಪುರಸ್ಕರಿಸಲಾಯಿತು. ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ವಿದ್ಯಾರ್ಥಿಗಳನ್ನು ಗೌರವಿಸಿ ಆಶೀರ್ವದಿಸಿದರು. ವಿದ್ಯಾರ್ಥಿಗಳು ಪೋಷಕರೊಂದಿಗೆ ಬಂದು ಸ್ವಾಮೀಜಿಯವರಿಂದ ಗೌರವ ಸ್ವೀಕರಿಸಿ ಆಶೀರ್ವಾದ ಪಡೆದುಕೊಂಡರು.

ಇನ್ನೂ ಸಾಧನೆ ಮಾಡುವಂತಾಗಲಿ:
ಆಶೀರ್ವಚನ ನೀಡಿದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು, ವಿದ್ಯಾರ್ಥಿಗಳ ಸಾಧನೆಯ ಹಿಂದೆ ಶಿಕ್ಷಕರ ಶ್ರಮ ದುಪ್ಪಟ್ಟು ಇದೆ. ವಿದ್ಯಾರ್ಥಿಗಳು ನಿರ್ಲಕ್ಷ್ಯ ತೋರದೆ ಮುಂದಿನ ಹಂತದಲ್ಲೂ ಉತ್ತಮ ಸಾಧನೆ ಮಾಡುವಂತವರಾಗಬೇಕು. ಇನ್ನೂ ಎತ್ತರದ ಮಟ್ಟಕ್ಕೆ ಏರಲು ಭಗವಂತನ ಅನುಗ್ರಹವಿರಲಿ ಎಂದು ನುಡಿದರು. ವಿದ್ಯಾರ್ಥಿಗಳು ಶಿಕ್ಷಕರನ್ನೇ ಅವಲಂಬಿಸಿದೆ ತಮ್ಮ ಸ್ವಂತ ಶ್ರಮದಿಂದ ಸಾಧನೆ ಮಾಡುವಂತವರಾಗಬೇಕು. ಇಲ್ಲಿ ದೊರೆತ ಗೌರವ ತಮ್ಮ ಶ್ರಮಕ್ಕೆ ಸಿಕ್ಕ ಫಲವಾಗಿದೆ. ಮುಂದಿನ ಶಿಕ್ಷಣಕ್ಕೆ ಇದೊಂದು ಮಾರ್ಗದರ್ಶನವಿದ್ದಂತೆ. ವಿದ್ಯಾರ್ಥಿ ಜೀವನದಲ್ಲಿ ಕಷ್ಟಪಟ್ಟಲ್ಲಿ ಮುಂದಿನ ಭವಿಷ್ಯ ಉಜ್ವಲವಾಗಲಿದೆ. ಈ ಬಗ್ಗೆ ವಿದ್ಯಾರ್ಥಿಗಳು ಚಿಂತಿತರಾಗಬೇಕೆಂದು ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದರು.

900 ವಿದ್ಯಾರ್ಥಿಗಳ ಅಧ್ಯಯನ:
ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು, ೨೦೦೧ರಲ್ಲಿ ೧೩ ವಿದ್ಯಾರ್ಥಿಗಳಿಂದ ಆಂಗ್ಲಮಾಧ್ಯಮ ಪ್ರೌಢಶಾಲಾ ವಿಭಾಗ ಆರಂಭಗೊಂಡಿತ್ತು. ಈಗ ಎಲ್‌ಕೆಜಿಯಿಂದ ೧೦ನೇ ತರಗತಿ ತನಕ ೯೦೦ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ದ.ಕ.ಜಿಲ್ಲೆಯ ೫೦೯ ಪ್ರೌಢಶಾಲೆಗಳ ಪೈಕಿ ನಮ್ಮ ಸಂಸ್ಥೆ ೨೪ನೇ ಸ್ಥಾನದಲ್ಲಿದೆ. ಪ್ರತಿವರ್ಷವೂ ಎಸ್‌ಎಸ್‌ಎಲ್‌ಸಿಯಲ್ಲಿ ಸಂಸ್ಥೆ ಶೇ.೧೦೦ ಫಲಿತಾಂಶ ದಾಖಲಿಸುತ್ತಿದೆ. ಕಲಿಕೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸುವುದು ಸಂಸ್ಥೆಯ ಕರ್ತವ್ಯ. ವಿದ್ಯಾರ್ಥಿಗಳಿಗೆ ನೀಡುವ ನಗದು ಪುರಸ್ಕಾರ ಅವರು ತಮ್ಮ ಕಲಿಕೆಯ ಅವಧಿಯಲ್ಲಿ ತೋರಿದ ಶ್ರಮಕ್ಕೆ ಸಿಕ್ಕಿದ ಹಣವಾಗಿದೆ. ಈ ಹಣವನ್ನು ಬ್ಯಾಂಕ್‌ನಲ್ಲಿಟ್ಟು ಉಳಿಸಿಕೊಳ್ಳಿ. ವಿದ್ಯಾರ್ಥಿಗಳು ಮುಂದೆ ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬೆಳೆಯಬೇಕೆಂದು ಹೇಳಿದರು.

ಸನ್ಮಾನ:
ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹ ನೀಡುತ್ತಿರುವ ಶ್ರೀ ರಾಮಕುಂಜೇಶ್ವರ ವಸತಿ ನಿಲಯದ ಪಾಲಕ, ಶಿಕ್ಷಕ ಗೋಪಾಲ ಎಂ.,ರವರನ್ನು ಸಂಸ್ಥೆಯ ಪರವಾಗಿ ಸ್ವಾಮೀಜಿಯವರು ಶಾಲು, ಫಲತಾಂಬೂಲ ನೀಡಿ ಸನ್ಮಾನಿಸಿದರು.

ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಅಧ್ಯಕ್ಷ ಕೃಷ್ಣಮೂರ್ತಿ ಇ. ಕಲ್ಲೇರಿಯವರು ಅಧ್ಯಕ್ಷತೆ ವಹಿಸಿದ್ದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರದೀಪ್ ರೈ ಮನವಳಿಕೆ, ಉಪಾಧ್ಯಕ್ಷ ಬಾಬು ಪೂಜಾರಿ, ಜೊತೆ ಕಾರ್ಯದರ್ಶಿ ವಾಣಿ, ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿ.ಪ್ರಾ.ಶಾಲಾ ನಿವೃತ್ತ ಮುಖ್ಯಶಿಕ್ಷಕ ಟಿ.ನಾರಾಯಣ ಭಟ್, ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ., ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಹರಿನಾರಾಯಣ ಆಚಾರ್, ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಲೋಹಿತ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲಾ ಮುಖ್ಯಶಿಕ್ಷಕಿ ಗಾಯತ್ರಿ ಸ್ವಾಗತಿಸಿ, ಸಹ ಶಿಕ್ಷಕಿ ಜ್ಯೋತಿ ವಂದಿಸಿದರು. ಶಿಕ್ಷಕ ಕಿಶೋರ್ ಕುಮಾರ್ ಕಾರ್‍ಯಕ್ರಮ ನಿರೂಪಿಸಿದರು. ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.