HomePage_Banner
HomePage_Banner
HomePage_Banner
HomePage_Banner

ನಮ್ಮ ಹಕ್ಕನ್ನು ನಮಗೆ ಕೊಡಿ: ನಗರಸಭೆ ಬಿಜೆಪಿ ಸದಸ್ಯರಿಂದ ಅಧಿಕಾರಕ್ಕಾಗಿ ಪಾದಯಾತ್ರೆ – ಕೆಮ್ಮಿಂಜೆಯಿಂದ ಮಿನಿ ವಿಧಾನಸೌಧಕ್ಕೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನಗರಸಭೆ ಚುನಾವಣೆ ನಡೆದ ಬಳಿಕವೂ ಇನ್ನೂ ಅಧಿಕಾರ ಸಿಕ್ಕಿಲ್ಲ ಎಂದು ನಗರಸಭಾ ಬಿಜೆಪಿ ಸದಸ್ಯರು ತಮ್ಮ ಅಧಿಕಾರಕ್ಕಾಗಿ ಜು.1ರಂದು ನಮ್ಮ ಹಕ್ಕು ನಮಗೆ ಕೊಡಿ ಎಂಬ ಘೋಷಣೆಯೊಂದಿಗೆ ಕೆಮ್ಮಿಂಜೆ ದೇವಸ್ಥಾನದ ಬಳಿಯಿಂದ ಮಿನಿ ವಿಧಾನ ಸೌಧ ತನಕ ಪಾದಯಾತ್ರೆ ಕೈಗೊಂಡಿದ್ದು, ಪಾದಯಾತ್ರೆ ನಡೆಯಿತು.

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಇರುವ ತಕರಾರು ಅರ್ಜಿಯಿಂದಾಗಿ ನಗರಸಭೆ ಚುನಾವಣೆ ನಡೆದು 8 ತಿಂಗಳು ಕಳೆದರೂ ಈಗಲೂ ಆಡಳಿತಾಧಿಕಾರಿಗಳೇ ಅಧಿಕಾರ ನಡೆಸುತ್ತಿದ್ದಾರೆ. ಚುನಾಯಿತ ಸದಸ್ಯರಿಗೆ ಇನ್ನೂ ಅಧಿಕಾರ ಸಿಕ್ಕಿಲ್ಲ. ಸದಸ್ಯರನ್ನು ನಂಬಿದ ಸ್ಥಳಿಯ ನಾಗರಿಕರು ಅಭಿವೃದ್ಧಿ ವಿಚಾರಕ್ಕಾಗಿ ಸದಸ್ಯರನ್ನು ಪ್ರಶ್ನಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಚುನಾಯಿತ ಸದಸ್ಯರಿಗೆ ನಗರಸಭೆಯ ಅಧಿಕಾರ ಹಸ್ತಾಂತರಿಸುವಂತೆ ಪಾದಯಾತ್ರೆಯ ಮೂಲಕ ಸದಸ್ಯರು ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರಾಗಿರುವ ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಜೀವಂಧರ್ ಜೈನ್, ಗ್ರಾಮಾಂತರ ಮಂಡಲದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ  ಸೇರಿದಂತೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಪುತ್ತೂರು ಮಿನಿ ವಿಧಾನ ಸಭಾದ ಎದುರಗಡೆ ಬಿಜೆಪಿ ನಗರಸಭಾ ಸದಸ್ಯರಿಂದ ಪ್ರತಿಭಟನೆ

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.