ಮಕ್ಕಳ ಸೇವೆ ಪ್ರಶಸ್ತಿ: ವ್ಯಕ್ತಿ, ಸಂಸ್ಥೆಗಳಿಂದ ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1

ಮಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಮಕ್ಕಳ ದಿನಾಚರಣೆಯಂದು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5  ವರ್ಷ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ವ್ಯಕ್ತಿಗಳಿಗೆ ತಲಾ 25  ಸಾವಿರ ರು. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ, ಸಂಸ್ಥೆಗಳಿಗೆ ತಲಾ 1 ಲಕ್ಷ ರು. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ವ್ಯಕ್ತಿ/ ಸಂಸ್ಥೆಗಳು ಅರ್ಜಿಯೊಂದಿಗೆ ದಾಖಲೆಗಳ ಪ್ರಸ್ತಾವನೆಯನ್ನು ಕನ್ನಡ ಭಾಷೆಯಲ್ಲಿ ದ್ವಿ ಪ್ರತಿಯೊಂದಿಗೆ ಆಗಸ್ಟ್ 31 ರೊಳಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯ್ತಿ ಕಟ್ಟಡ ಸಂಕೀರ್ಣ, ನೆಲಮಹಡಿ, ಕೊಟ್ಟಾರ, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0824 – 2451254

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.