ಬೊಳುವಾರಿನಲ್ಲಿ ಕಾರು ಡಿಕ್ಕಿಯಾಗಿ ಧರೆಗುರುಳಿದ ವಿದ್ಯುತ್ ಕಂಬ – ಕಾರಿನಲ್ಲಿದ್ದವರು ಅಪಾಯದಿಂದ ಪಾರು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಬೊಳುವಾರಿನಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ಧರೆಗುರುಳಿದ ಘಟನೆ ಆ.8ರ ನಸುಕಿನ ಜಾವ ನಡೆದ ಬಗ್ಗೆ ವರದಿಯಾಗಿದೆ.

ಉಪ್ಪಿನಂಗಡಿ ಕಡೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಬಳಿಯ ಅಮನ್ ಗುಜುರಿ ವ್ಯಾಪಾರ ಸಂಸ್ಥೆ ಎದುರಿನ ಕಬ್ಬಿಣದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್‌ದಲ್ಲಿ ತಂತಿಗಳು ಶಾರ್ಟ್‌ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿತ್ತು. ಕಂಬ ಧರೆಗುರುಳಿದೆ. ಕಾರಿನಲ್ಲಿದ್ದವರು ವಿದ್ಯುತ್ ಅಘಾತದಿಂದ ಪಾರಾಗಿದ್ದಾರೆ. ಮೆಸ್ಕಾಂ ಸಿಬಂದಿಗಳು ದುರಸ್ಥಿ ಕಾರ್ಯಕ್ಕೆ ಮುಂದಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.