ಶ್ರೀಧಾಮದಲ್ಲಿ ಒಂದು ಮಂಡಲ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ

Puttur_Advt_NewsUnder_1
Puttur_Advt_NewsUnder_1
  • ಸ್ವಪ್ರಯತ್ನದಿಂದ ಎಲ್ಲವನ್ನು ಸಾಧಿಸಲು ಸಾಧ್ಯ-ಮಾಣಿಲಶ್ರೀ

ವಿಟ್ಲ:  ಸ್ವಪ್ರಯತ್ನವಿಲ್ಲದೇ ಯಾವುದೇ ಸಾಧನೆ, ಸಂಶೋಧನೆ, ಗೌರವಯುತವಾದ ಸ್ಥಾನ ಪಡೆಯಲು ಸಾಧ್ಯವಿಲ್ಲ ಎಂದು ಮಾಣಿಲ ಶ್ರೀಧಾಮ ಶ್ರೀಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು.

ಅವರು ಆ.11ರಂದು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ನಡೆಯುತ್ತಿರುವ ಒಂದು ಮಂಡಲ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆಯ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ವ್ಯಕ್ತಿ ಪರಿವರ್ತನೆಯೇ ವಿಶ್ವಪರಿವರ್ತನೆಗೆ ಮಾಲವಾಗಿದೆ. ಒಳ್ಳೆಯ ಬೀಜ ಬಿತ್ತಿದಾಗ ಸುಪುಷ್ಟ ಗಿಡ ಅಂಕುರಿಸುವಂತೆ ಒಳ್ಳೆಯ ಮನಸ್ಸಿನಿಂದ ಮಾಡಿದ ಕಾರ್ಯಸಾಧನೆ ಜನಮಾನಸದಲ್ಲಿ ಚಿರಸ್ಥಾಯಿಯಾಗುವುದು.  ಕರ್ತವ್ಯನಿಷ್ಠೆ, ದಾನಧರ್ಮಗಳಲ್ಲಿ ಸದಾ ದೇವರು ಇರುತ್ತಾರೆ. ನಮ್ಮಲ್ಲಿ ಒಳ್ಳೆಯ ಮನಸ್ಸು ಇದ್ದಾಗ ಮಾತ್ರ ಇವೆಲ್ಲ ನಡೆಸಲು ಸಾಧ್ಯವಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಸಾಮಾಜಿಕ, ಧಾರ್ಮಿಕ ಮುಂದಾಳು ಕೈಯ್ಯೂರು ನಾರಾಯಣ ಭಟ್, ಅಶೋಕ್ ಶೆಟ್ಟಿ ಬಿರ್ಕಾಪು ಮುರುವ, ಆನಂದ ಶೆಟ್ಟಿ ತಾಳಿಪಡ್ಪು, ಪುರುಷೋತ್ತಮ ಶೆಟ್ಟಿ ಕೆಳಗಿನಮನೆ ಪೆರುವಾಯಿ ಭಾಗವಹಿಸಿದ್ದರು.
ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ವನಿತಾ ವಿ.ಶೆಟ್ಟಿ, ಸ್ವಾಗತಿಸಿದರು. ಕಾರ್ಯದರ್ಶಿ ಗೀತಾ ಪುರುಷೋತ್ತಮ ಕಾರ್ಯಕ್ರಮ ನಿರೂಪಿಸಿದರು.

ಧಾರ್ಮಿಕ‌ ಕಾರ್ಯಕ್ರಮ: 
ಶ್ರೀ ಕ್ಷೇತ್ರದಲ್ಲಿ ಬೆಳಗ್ಗೆ ಗಣಪತಿ ಹವನ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀಗುರುಪೂಜೆ, ಬಾಲಭೋಜನ, ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ಕನಕಧಾರಾ ಯಾಗ, ಸಾಮೂಹಿಕ ಕುಂಕುಮಾರ್ಚನೆ, ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಸಂಜೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಶ್ರೀದುರ್ಗಾ ಪೂಜೆ, ಆಶ್ಲೇಷ ಬಲಿ, ಶ್ರೀ ವಿಠೋಭರುಕ್ಮಿಣಿ ಧ್ಯಾನ ಮಂದಿರದಲ್ಲಿ ಭಜನಾ ಸಂಕೀರ್ತನೆ, ಶ್ರೀಲಕ್ಷ್ಮೀ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.