HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ತೆಂಕಿಲದಲ್ಲಿ ಬಿರುಕು ಬಿಟ್ಟ ಗುಡ್ಡ! ಭೂ ವಿಜ್ಞಾನ ಅಧಿಕಾರಿಗಳಿಂದ ಪರಿಶೀಲನೆ: ಭೂಕಂಪನದ ಸಾಧ್ಯತೆ- ವಲಯ ಅಧಿಕಾರಿಗಳ ಸೂಚನೆ

Puttur_Advt_NewsUnder_1
Puttur_Advt_NewsUnder_1
ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಂದ ಪರಿಶೀಲನೆ

ಪುತ್ತೂರ: ತೆಂಕಿಲ ದರ್ಖಾಸು ಎಂಬಲ್ಲಿ ಗೇರು ಅಭಿವೃದ್ಧಿ ನಿಗಮಕ್ಕೆ ಸೇರಿದ ಗೇರು ತೋಟವಿರುವ ಗುಡ್ಡದಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ಆ.12ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಗುಡ್ಡದಲ್ಲಿ ಭೂ ಕಂಪನ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವ ಅಪಾಯದ ಸೂಚನೆಯನ್ನು ಅಧಿಕಾರಿಗಳು ನೀಡಿದ್ದಾರೆ. 

ನಗರದ ಹೊರವಲಯದ ತೆಂಕಿಲದ ದರ್ಖಾಸು ಎಂಬಲ್ಲಿರುವ ಗುಡ್ಡದಲ್ಲಿ ಬಿರುಕು ಕಾಣಿಸಿಕೊಂಡಿರುವುದು ಆ.11ರಂದು ಸ್ಥಳೀಯರ ಗಮನಕ್ಕೆ ಬಂದಿತ್ತು, ಗುಡ್ಡದ ತಪ್ಪಲು ಪ್ರದೇಶದ ಮಧ್ಯಭಾಗದಲ್ಲಿ ಸುಮಾರು 200 ಮೀಟರ್ ಉದ್ದದಲ್ಲಿ ಭೂಮಿ ಬಿರುಕು ಬಿಟ್ಟಿರುವುದು ಕಂಡುಬಂದಿದೆ. ಅಲ್ಲದೆ ಗುಡ್ಡದ ಮೇಲಿನ ಭಾಗದಲ್ಲಿಯೂ ಅಡ್ಡ ಮತ್ತು ನೇರವಾಗಿ ಬಿರುಕು ಬಿಟ್ಟಿರುವುದು ಪರಿಶೀಲನೆಯ ವೇಳೆ ಕಂಡು ಬಂದಿದೆ. ಭೂವಿಜ್ಞಾನ ಇಲಾಖೆಯ ಪ್ರಭಾರ ಉಪನಿರ್ದೇಶಕಿ ಪದ್ಮಶ್ರೀ, ಅಂತರ್ಜಲ ಪರಿಶೋಧಕಿ ವಸುಧಾರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಣ್ಣು ಮಿಶ್ರಿತ ನೀರು:
ಬಿರುಕು ಬಿಟ್ಟ ಗುಡ್ಡದಲ್ಲಿರುವ ಮೊರ್ಗೇಕಳ ಗರಡಿಯ ಬಳಿ ಮಣ್ಣಿನ ಅಡಿಭಾಗದಿಂದ ಮಣ್ಣುಮಿಶ್ರಿತ ನೀರು ಮೇಲೆದ್ದು ಹರಿದು ಹೋಗುತ್ತಿದೆ. ಗುಡ್ಡದ ಮೇಲಿಂದಲೂ ನೀರು ಹರಿದು ಬರುತ್ತಿದೆ. ಮಳೆಯ ನೀರು ಬಿರುಕು ಬಿಟ್ಟ ಜಾಗದ ಮುಖಾಂತರ ಇಂಗಿ ಒತ್ತಡ ಅಧಿಕವಾಗಿ ಮತ್ತೊಂದು ಮಡಿಕೇರಿಯ ಜೋಡುಪಾಲ ದುರಂತವನ್ನು ನೆನಪಿಸುವಂತಿರುವುದರಿಂದ ಈ ಭಾಗದ ಜನತೆಯಲ್ಲಿ ಭೀತಿ ಸೃಷ್ಠಿಸಿದೆ.

ಮಠಂದೂರು ಸೂಚಿಸಿದ್ದರು…..
ಈ ಭಾಗದಲ್ಲಿ ರವಿ ಮತ್ತು ಹರೀಶ್ ಎಂಬವರಿಗೆ ಸೇರಿದ ನಿರ್ಮಾಣ ಹಂತದಲ್ಲಿರುವ ಮನೆಯ ಮೇಲೆ ಗುಡ್ಡ ಜರಿದು ಬಿದ್ದು, ಅಪಾರ ನಷ್ಟ ಸಂಭವಿಸಿತ್ತು. ಈ ಹಿನ್ನಲೆಯಲ್ಲಿ ಆ.೧೧ರಂದು ಸಂಜೆ ಸ್ಥಳಕ್ಕೆ ಭೇಟಿ ನೀಡಿ ಹಾನಿಗೊಳಗಾದ ಮನೆ ಹಾಗೂ ಬಿರುಕು ಬಿಟ್ಟ ಸ್ಥಳ ಪರಿಶೀಲನೆ ನಡೆಸಿದ್ದ ಶಾಸಕ ಸಂಜೀವ ಮಠಂದೂರು ಅವರು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಭೂವಿಜ್ಞಾನ ಇಲಾಖೆಯವರು ಸ್ಥಳ ಪರಿಶೀಲನೆ ಮಾಡಿ ಸೂಕ್ತ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು.

ಮೊಗೇರ್ಕಳ ಗರಡಿ ಪಕ್ಕದಲ್ಲಿ ಮಣ್ಣಿನಡಿಯಿಂದ ಮಣ್ಣುಮಿಶ್ರಿತ ನೀರು ಮೇಲೆದ್ದು ಹರಿಯುತ್ತಿರುವುದು

ಭೂ ಕಂಪನದ ಸಾಧ್ಯತೆ:
ಬಿರುಕು ಬಿಟ್ಟ ಗುಡ್ಡವನ್ನು ಪರಿಶೀಲನೆ ನಡೆಸಿದ ಬಳಿಕ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಭೂವಿಜ್ಞಾನ ಇಲಾಖೆಯ ಪ್ರಭಾರ ಉಪನಿರ್ದೇಶಕಿ ಪದ್ಮಶ್ರೀ, ಈ ಗುಡ್ಡದ ರಚನಾ ವಲಯವು ಬಿರುಕುಬಿಟ್ಟಿದ್ದು, ಇದು ಅಪಾಯಕಾರಿ ವಲಯವಾಗಿದೆ. ತೇವಾಂಶ ರಹಿತ ಪದರವು ಮಳೆಗಾಲದಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ಹೀರಿಕೊಳ್ಳುತ್ತಿದೆ. ಇದರಿಂದಾಗಿ ಮಣ್ಣಿನ ಒಳಗೆ ಶೇಖರಣೆಗೊಂಡ ನೀರು ಹೊರಹೋಗಲು ಸಾಧ್ಯವಾಗದೆ ಒತ್ತಡ ನಿರ್ಮಾಣವಾಗಿ ಬಿರುಕು ಬಿಟ್ಟಿದೆ. ಇದು ಲಘು ಭೂಕಂಪನದ ಸೂಚನೆಯಾಗಿದ್ದು, ಮಳೆಗಾಲದಲ್ಲಿ ಭೂಕಂಪನವಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಈ ಗುಡ್ಡ ಪ್ರದೇಶ ಅಪಾಯಕಾರಿಯಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುತ್ತೇವೆ. ಭೂಕಂಪನ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವುದರಿಂದ ಈ ಪ್ರದೇಶ ವಾಸಕ್ಕೆ ಯೋಗ್ಯವಾಗಿಲ್ಲ. ಗುಡ್ಡದಲ್ಲಿ ಅಲ್ಲಲ್ಲಿ ತೂತುಗಳನ್ನು ಕೊರೆದು ಶೇಖರಣೆಗೊಂಡ ನೀರು ಹೊರಹೋಗುವಂತೆ ಮಾಡುವುದರಿಂದ ತಾತ್ಕಾಲಿಕವಾಗಿ ಅಪಾಯ ತಡೆಯಬಹುದಾಗಿದೆ. ಆದರೆ ಇದು ಸಮಸ್ಯೆಗೆ ಶಾಶ್ವತ ಪರಿಹಾರವಲ್ಲ ಎಂದು ಅವರು ತಿಳಿಸಿದ್ದಾರೆ.

ಗುಡ್ಡ ಬಿರುಕುಬಿಟ್ಟಿರುವುದು

ಆತಂಕದ ಬದುಕು:
ಇದೇ ಗುಡ್ಡದ ತಪ್ಪಲಿನ ಮಧ್ಯಭಾಗದಲ್ಲಿರುವ ನಿರ್ಮಾಣ ಹಂತದ ಮನೆಯ ಮೇಲೆ ಆ.೧೦ರ ಮಧ್ಯರಾತ್ರಿ ವೇಳೆ ಗುಡ್ಡ ಜರಿದು ಬಿದ್ದು ಹಾನಿಯಾಗಿದ್ದು, ಅಲ್ಲಿನ ರಾಮ ಎಂಬವರ ಮನೆಯ ಸಂಸಾರವನ್ನು ಸ್ಥಳಾಂತರ ಮಾಡುವಂತೆ ಶಾಸಕರು ಸೂಚಿಸಿದ್ದರು. ಇದೇ ಭಾಗದಲ್ಲಿರುವ ಮೊಗೇರ್ಕಳ ಗರಡಿ ಸೇರಿದಂತೆ ಸೇಸಪ್ಪ ಗೌಡ, ಗಿರಿಜಾ, ಕಮಲ, ಮಹಾಲಿಂಗ, ಗುರುವ, ಆನಂದ, ಗಂಗಾಧರ, ಬೇಬಿ,ಸುಶೀಲ, ಸತೀಶ್ ಎಂಬವರ ಮನೆಗಳು ಅಪಾಯದ ವಲಯದಲ್ಲಿದೆ. ಅಲ್ಲದೆ ಗುಡ್ಡದ ತಪ್ಪಲಿನ ಕೆಳಭಾಗದಲ್ಲಿ ಸುಮಾರು ೨೫ಕ್ಕೂ ಅಧಿಕ ಮನೆಗಳಿವೆ. ಭೂಕಂಪನ, ಅಪಾಯದ ಸೂಚನೆಯಿಂದಾಗಿ ಇಲ್ಲಿನ ಮನೆಮಂದಿ ಆತಂಕದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಪುತ್ತೂರು ತಹಶೀಲ್ದಾರ್ ಅನಂತ ಶಂಕರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.