Breaking News

ಕಾಣಿಯೂರು ಪ್ರಾಥಮಿಕ ಶಾಲಾ ಮಕ್ಕಳ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Puttur_Advt_NewsUnder_1
Puttur_Advt_NewsUnder_1
  • ಉತ್ತಮ ಕ್ರೀಡಾಪಟುವಾಗಲು ಕಠಿಣ ಅಭ್ಯಾಸ ಅಗತ್ಯ- ಪ್ರಮೀಳಾ ಜನಾರ್ದನ


ಕಾಣಿಯೂರು: ನಮ್ಮ ಸಂಸ್ಕೃತಿ ಮತ್ತು ಪ್ರಕೃತಿಯನ್ನು ಪ್ರತಿಬಿಂಬಿಸುವಂತಹ ಕ್ರೀಡೆಗಳಲ್ಲಿ ಹೆಚ್ಚೆಚ್ಚು ತೊಡಗಿಸಿಕೊಂಡು ದೇಶ ಭಕ್ತಿಯೊಂದಿಗೆ ರಾಷ್ಟ್ರ ಕಟ್ಟುವ ಕಾಯಕವನ್ನು ಮಾಡೋಣ. ಉತ್ತಮ ಕ್ರೀಡಾಪಟುವಾಗಲು ಕಠಿಣ ಅಭ್ಯಾಸ ಅಗತ್ಯ. ಶ್ರದ್ಧೆ, ಏಕಾಗ್ರತೆಯಿಂದ ಪ್ರಯತ್ನಿಸಿದಾಗ ಕ್ರೀಡಾ ಸಾಧನೆ ಸಾಧ್ಯ ಎಂದು ಬೆಳಂದೂರು ಕ್ಷೇತ್ರದ ಜಿ.ಪಂ. ಸದಸ್ಯೆ ಪ್ರಮೀಳಾ ಜನಾರ್ದನ ಹೇಳಿದರು.

ಅವರು ದ.ಕ.ಜಿ.ಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ವತಿಯಿಂದ ಕಾಣಿಯೂರು ಸ.ಹಿ.ಪ್ರಾ.ಶಾಲೆಯಲ್ಲಿ ಆ .16ರಂದು ನಡೆದ ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ಕಾಣಿಯೂರು ಗ್ರಾ.ಪಂ ಅಧ್ಯಕ್ಷೆ ಮಾಧವಿ ಕೋಡಂದೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೈಹಿಕ ಮತ್ತು ಮಾನಸಿಕ ಆರೋಗ್ಯದ ಗುಟ್ಟು ಕ್ರೀಡೆಗಳಲ್ಲಿ ಅಡಗಿದೆ. ವಿದ್ಯೆಯ ಜೊತೆಗೆ ಕ್ರೀಡಾ, ಸಾಂಸ್ಕೃತಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಪಾಲ್ಗೊಗೊಳ್ಳಬೇಕು ಎಂದರು. ತಾ.ಪಂ ಉಪಾಧ್ಯಕ್ಷೆ ಲಲಿತಾ ಈಶ್ವರ, ಕಾಣಿಯೂರು ಗ್ರಾ.ಪಂ ಸದಸ್ಯ ರಾಮಣ್ಣ ಗೌಡ ಮುಗರಂಜ, ಪುತ್ತೂರು ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್ ಕುಮಾರ್, ಕಾಣಿಯೂರು ಕ್ಲಸ್ಟರ್ ಸಿಆರ್‌ಪಿ ಯಶೋದ, ಕಾಣಿಯೂರು ಸ.ಹಿ.ಪ್ರಾ.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪದ್ಮನಾಭ ಗುಂಡಿಗದ್ದೆ ಶುಭಹಾರೈಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾಣಿಯೂರು ಶಾಲಾ ಮುಖ್ಯಗುರು ಪುಂಡಲಿಕ ಪೂಜಾರ ಸ್ವಾಗತಿಸಿ, ಶಿಕ್ಷಕಿ ಮಾಲತಿ ವಂದಿಸಿದರು. ಶಿಕ್ಷಕಿ ಸುಜಯಾರವರು ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.