ಅಮೋಘ ನಾರಾಯಣರವರಿಗೆ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ; ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಿಕ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ-2018-19 ಪುತ್ತೂರಿನ ಅಮೋಘ ನಾರಾಯಣರವರು ಆಯ್ಕೆಯಾಗಿ ರಾಜ್ಯ ಮಟ್ಟದಲ್ಲಿ ಸ್ಪರ್ಧಿಸುವ ಅವಕಾಶ ಪಡೆದುಕೊಂಡಿದ್ದಾರೆ.

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ಯುವ ವಿಜ್ಞಾನಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಆಯ್ಕೆಯಾಗಿದ್ದು, ರಾಜ್ಯ ಮಟ್ಟದ ಸ್ಪರ್ಧೆಯು ಸೆಪ್ಟೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆಯಲಿದೆ. ಅಮೋಘ ನಾರಾಯಣ ಅವರು ಕಳೆದ ಜೂನ್‌ನಲ್ಲಿ ನ್ಯೂಯಾರ್ಕ್‌ನಲ್ಲಿ ಜರಗಿದ, ಅಂತರ್ರಾಷ್ಟ್ರೀಯ ಮಟ್ಟದ ಜೀನಿಯಸ್ ಒಲಂಪಿಯಾಡ್‌ನಲ್ಲಿ ಗ್ರ್ಯಾಂಡ್ ಸಿಲ್ವರ್ ಅವಾರ್ಡನ್ನು ಪಡೆದುಕೊಂಡಿದ್ದರು. ಅಮೋಘನಾರಾಯಣ ಅವರು ಮೂಡಬಿದ್ರೆ ಆಳ್ವಾಸ್ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಕಲಿಯುತ್ತಿದ್ದು, ಪುತ್ತೂರು ದರ್ಬೆಯ ವೈದ್ಯರುಗಳಾದ ಡಾ. ರಾಜಾರಾಂ ಮತ್ತು ಡಾ. ಸುಧಾ ರಾಜಾರಾಂ ಅವರ ಪುತ್ರ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.