ಪುಣಚ: 17 ನೇ ವರ್ಷದ ಮೊಸರು ಕುಡಿಕೆ ಉತ್ಸವ – ಸನ್ಮಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುಣಚ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಆಚರಣೆ ಸಮಿತಿ ವತಿಯಿಂದ 17 ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವವು ಪುಣಚ ಮಹಿಷಮರ್ದಿನಿ ದೇವಸ್ಥಾನದ ಎದುರು ಗದ್ದೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯ  ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ವಿವಿಧ ಸ್ಪರ್ಧೆ ಜರಗಿತು.  ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.

 

ಸಮಾರೋಪ: ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪುಣಚ ಧರ್ಮಸ್ಥಳ ಗ್ರಾಮಾಭಿವೃದ್ಧಿ ವಲಯ ಸೇವಾ ಪ್ರತಿನಿಧಿ ರಮೇಶ್ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪುಣಚ ದೇವಸ್ಥಾನದ ಆಡಳಿತ ಸಮಿತಿ ಸದಸ್ಯರಾದ ಹರ್ಷ ಶಿಬರೂರಾಯ ಏರ್ಣಕಟ್ಟೆ, ನಿವೃತ ಯೋಧ ಗಣೇಶ್ ಪುಜಾರಿ ಪಾದೆಕಟ್ಟ, ಸವಣೂರು ವಿದ್ಯಾರಶ್ಮಿ ಪ.ಪೂ ಕಾಲೇಜು ಉಪನ್ಯಾಸಕ ವೆಂಕಟ್ರಮಣ ನಟ್ಟಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷರಾದ ಮಹೇಶ್ ಶೆಟ್ಟಿ ಬೈಲುಗುತ್ತು, ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾದ ಅಪ್ಪಣ್ಣ ನಾಯ್ಕ ನೂಜಿ ಉಪಸ್ಥಿತರಿದ್ದರು.

ಬಹುಮಾನ ವಿತರಣೆ: ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಸ್ಪರ್ಧಾ ವಿಜೇತರರಿಗೆ ಹಾಗೂ ಶ್ರೀ ಕೃಷ್ಣ ವೇಷ ಧರಿಸಿದ ಎಲ್ಲಾ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು.

ಸನ್ಮಾನ: ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಡಿ ಭದ್ರತಾ ಪಡೆಯ ನಿವೃತ ಯೋಧ ಗಣೇಶ್ ಪುಜಾರಿ ಪಾದೆಕಟ್ಟರವರನ್ನು ಸನ್ಮಾನಿಸಲಾಯಿತು. ಯಕ್ಷಗಾನ ಕಲಾಸೇವೆಯನ್ನು ಪರಿಗಣಿಸಿ ಜಗನ್ನಾಥ ಸಂಕೇಶ ರವರನ್ನು ಕಿರುಕಾಣಿಕೆ ನೀಡಿ ಗೌರವಿಸಲಾಯಿತು. ಮೊಸರು ಕುಡಿಕೆ ಉತ್ಸವ ಆಚರಣೆ ಸಮಿತಿಯ ಸಂಚಾಲಕ ನಾರಾಯಣ ಬನ್ನಿಂತಾಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಜಗನ್ನಾಥ ಸಂಕೇಶ ಕಾರ್ಯಕ್ರಮ ನಿರೂಪಿಸಿದರು. ರಾಜು ಕೆ. ಕೆಲ್ಲಾಳಿ ವಂದಿಸಿದರು.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.