ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ


ಕಾಣಿಯೂರು: ನಮ್ಮ ಆಚರಣೆಗಳು, ಧಾರ್ಮಿಕ ತಳಹದಿಯನ್ನು ಗಟ್ಟಿಗೊಳಿಸುವುದರ ಮೂಲಕ ಧರ್ಮವನ್ನು ಉಳಿಸಲು ಸಾಧ್ಯ, ಶ್ರೀ ಕೃಷ್ಣ ಜನ್ಮಾಷ್ಠಮಿಯಂತಹ ಉತ್ತಮವಾದ ಕಾರ್ಯಕ್ರಮಗಳನ್ನು ಸಂಘಟಿಸುವುದರ ಮೂಲಕ ಯುವಕರು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ ಹೇಳಿದರು. ಅವರು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಆಶ್ರಯದಲ್ಲಿ ಕಾಣಿಯೂರು ಸ.ಹಿ.ಪ್ರಾ.ಶಾಲಾ ವಠಾರದಲ್ಲಿ ಆ 24ರಂದು ನಡೆದ 7ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ಪುನೀತ್ ಕಲ್ಪಡ ವಹಿಸಿದ್ದರು. ಕಾಣಿಯೂರು ಸ.ಹಿ.ಪ್ರಾ.ಶಾಲಾ ಮುಖ್ಯಗುರು ಪುಂಡಲೀಕ ಪೂಜಾರ್, ವಿಶ್ವ ಹಿಂದೂ ಪರಿಷತ್ ಭಜರಂಗದಳದ ವಲಯಾಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಕಾಣಿಯೂರು ಬಿ ಒಕ್ಕೂಟದ ಅಧ್ಯಕ್ಷ ದಿನೇಶ್ ಮುಗರಂಜ, ಯುವಕ ಮಂಡಲದ ಗೌರವಾಧ್ಯಕ್ಷ ಕೃಷ್ಣಪ್ರಸಾದ್ ಭಟ್ ಕಲ್ಪಡ, ಮಾಜಿ ಅಧ್ಯಕ್ಷ ಪರಮೇಶ್ವರ ಅನಿಲ, ಹಿಂದೂ ಜಾಗರಣಾ ವೇದಿಕೆಯ ಕಾಣಿಯೂರು ವಲಯ ಅಧ್ಯಕ್ಷ ಲಕ್ಷ್ಮಣ ಗೌಡ ಮುಗರಂಜ ಉಪಸ್ಥಿತರಿದ್ದರು. ಯುವಕ ಮಂಡಲದ ಕಾರ್ಯದರ್ಶಿ ಜಗದೀಶ್ ಪೆರ್ಲೋಡಿ ಸ್ವಾಗತಿಸಿ, ಕಾಣಿಯೂರು ಗ್ರಾ.ಪಂ ಸದಸ್ಯ ಸುರೇಶ್ ಓಡಬಾಯಿ ವಂದಿಸಿದರು. ತಾ.ಪಂ ಮಾಜಿ ಉಪಾಧ್ಯಕ್ಷ ಬಾಬು ಮಾದೋಡಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿವಿಧ ಸ್ಪರ್ಧೆಗಳು ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.