Breaking News

ಮಗು ಸ್ನೇಹಿ ಶಾಲಾ ಕಾರ್ಯಕ್ರಮ- ಸಮಾಲೋಚನಾ ಸಭೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪಡಿ ಸಂಸ್ಥೆ ಮಂಗಳೂರು ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇದರ ವತಿಯಿಂದ ಮಗು ಸ್ನೇಹಿ ಶಾಲಾ ಕಾರ್ಯಕ್ರಮದ ಸಮಾಲೋಚನಾ ಸಭೆಯು ನೆಲ್ಲಿಕಟ್ಟೆ ಶಾಲೆಯಲ್ಲಿ ನಡೆಯಿತು.

ಪಡಿ ಸಂಸ್ಥೆಯ ನಿರ್ದೇಶಕ ರೆನ್ನಿ ಡಿಸೋಜಾರವರು ಮಕ್ಕಳ ರಕ್ಷಣಾ ನೀತಿ ಮತ್ತು ಮಗು ಸ್ನೇಹಿ ಶಾಲಾ ಕಾರ್ಯಕ್ರಮದ ಧ್ಯೇಯ ಉದ್ದೇಶಗಳನ್ನು ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣು ಪ್ರಸಾದ್ ಅವರು ಮಾತನಾಡಿ ಸಮುದಾಯದ ಭಾಗವಹಿಸುವಿಕೆ ಇದ್ದಾಗ ಮಗು ಸ್ನೇಹಿ ವಾತಾವರಣವನ್ನು ಪ್ರತಿ ಶಾಲೆಗಳಲ್ಲೂ ಮಾಡಲು ಸಾಧ್ಯ ಎಂದು ತಿಳಿಸಿದರು. ವೇದಿಕೆಯಲ್ಲಿ ಸಮನ್ವಯಾಧಿಕಾರಿಗಳಾದ ಮೋನಪ್ಪ, ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ನಯನಾ ರೈ ಉಪಸ್ಥಿತರಿದ್ದರು. ಪಡಿತರ ಸಂಸ್ಥೆಯ ತಾಲೂಕು ಸಂಯೋಜಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ ಜೆ ಶೆಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರು ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಮತ್ತು ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯರು ಭಾಗವಹಿಸಿದ್ದರು. ಕೋಶಾಧಿಕಾರಿ ವತ್ಸಲ ನಾಯಕ್ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.