ಸಬಳೂರು: ರಾಮಕುಂಜ ಕ್ಷಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Puttur_Advt_NewsUnder_1
Puttur_Advt_NewsUnder_1


ರಾಮಕುಂಜ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ರಾಮಕುಂಜ ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ರಾಮಕುಂಜ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಕೊಲ ಗ್ರಾಮದ ಸಬಳೂರು ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.29ರಂದು ನಡೆಯಿತು.

ಜಿ.ಪಂ.ಸದಸ್ಯ ಸರ್ವೋತ್ತಮ ಗೌಡರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರತಿ ಮಗುವು ಶೈಕ್ಷಣಿಕವಾಗಿ ಪ್ರಗತಿ ಕಾಣಲು ಪಠ್ಯದ ಜೊತೆಗೆ ಸೃಜನಾತ್ಮಕ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಯಂತಹ ಸ್ಪರ್ಧೆಗಳು ಪೂರಕವಾಗಿದೆ. ರಾಜ್ಯ, ಕೇಂದ್ರ ಸರಕಾರಗಳು ಸರಕಾರಿ ಶಾಲೆಗಳ ಶ್ರೇಯೋಭಿವೃದ್ದಿಗೆ ಹಲವಾರು ಆರೋಗ್ಯಕರ ಯೋಜನೆಗಳನ್ನು ಹಮ್ಮಿಕೊಂಡಿದೆ. ಇದರಿಂದ ಸರಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತಹ ಗುಣಮಟ್ಟದ ಶಿಕ್ಷಣ ನೀಡುವಂತಾಗಿದೆ. ಮಗುವಿನ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿಯಂತಹ ಪಠ್ಯೇತರ ಚಟುವಟಿಕೆ ವೇದಿಕೆಯಾಗಿದೆ. ಎಲ್ಲಾ ಪೋಷಕರು , ಶಿಕ್ಷಕರು ವಿದ್ಯಾರ್ಥಿಗಳಿಗೆ ಇಂತಹ ಕಾರ್‍ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರಣೆ ನೀಡಬೇಕು ಎಂದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಗೌಡ ಕೊಲ್ಯ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ತಾರನಾಥ ಸವಣೂರು, ಬಿಆರ್‌ಪಿ ದೇವಕಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್‍ಯದರ್ಶಿ ರಾಮಕೃಷ್ಣ ಮಲ್ಲಾರ ಶುಭಹಾರೈಸಿದರು.

ಶಾಲಾ ಹಿರಿಯ ವಿದಾರ್ಥಿ ಸಂಘದ ಕೋಶಾಧಿಕಾರಿ ಚಿದಾನಂದ ಪಾನ್ಯಾಲು, ಶಾಲಾ ವಿದ್ಯಾರ್ಥಿ ನಾಯಕ ವಿಜಿತ್ ಕೊಲ್ಯ, ಉಪನಾಯಕಿ ಜ್ಯೋತಿ ಉಪಸ್ಥಿತರಿದ್ದರು. ಸಿಆರ್‌ಪಿ ಮಹೇಶ್ ಪ್ರಸ್ತಾವಿಸಿದರು. ಶಾಲಾ ಮುಖ್ಯಗುರು ವಾರಿಜಾ ಸ್ವಾಗತಿಸಿದರು. ಶಿಕ್ಷಕ ಪದ್ಮಯ್ಯ ವಂದಿಸಿದರು. ಶೇಖರ ಬಲ್ಯ ಕಾರ್‍ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.