ಸೆ.2: ಬಜತ್ತೂರು ಮುದ್ಯದಲ್ಲಿ 6ನೇ ವರ್ಷದ ಗಣೇಶೋತ್ಸವ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮುದ್ಯ,ಬಜತ್ತೂರು ಇದರ ವತಿಯಿಂದ 6ನೇ ವರ್ಷದ ಶ್ರೀ ಗಣೇಶೋತ್ಸವ ಮತ್ತು ಧಾರ್ಮಿಕ ಸಮಾರಂಭ ಸೆ.2ರಂದು ಬಜತ್ತೂರು ಮುದ್ಯ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಲಿದೆ ಎಂದು ಗಣೇಶೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಶಿವಣ್ಣ ಗೌಡ ಬಿದಿರಾಡಿ, ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಗೌಡ ಉಪಾತಿಪಾಲು, ಸಂಚಾಲಕ ರಾಧಾಕೃಷ್ಣ ಕೆ.ಎಸ್.,ರವರು ತಿಳಿಸಿದ್ದಾರೆ.

ಬೆಳಿಗ್ಗೆ ವಿದ್ಯಾಗಣಪತಿ ಪ್ರತಿಷ್ಠೆ, ಬಳಿಕ ಗಣಹವನ, ಶ್ರೀ ಪಂಚಲಿಂಗೇಶ್ವರ ದೇವರಿಗೆ ನಿತ್ಯಪೂಜೆ, ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಮುದ್ಯ ಇವರಿಂದ ಭಜನೆ, ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಧಾರ್ಮಿಕ ಸಭೆ ನಡೆಯಲಿದ್ದು ನ್ಯಾಯವಾದಿ ಎನ್.ಕೆ.ಜಗನ್ನೀವಾಸ ರಾವ್‌ರವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಶಾಸಕ ಸಂಜೀವ ಮಠಂದೂರು, ಬಜತ್ತೂರು ಗ್ರಾ.ಪಂ.ಸದಸ್ಯ ಕೆ.ಎಸ್.ಆನಂದ, ಬಜತ್ತೂರು ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ ಶಿಬಾರ್ಲ, ಬೆದ್ರೋಡಿ ಶ್ರೀ ಸಿದ್ದಿವಿನಾಯಕ ಭಜನಾ ಮಂಡಳಿ ಮಾಜಿ ಕಾರ್ಯದರ್ಶಿ ಮೋನಪ್ಪ ಗೌಡ, ಯಶೋದ ಸದಾನಂದ ಸಾನಿಧ್ಯ ಬಜತ್ತೂರು, ಸೇವಾ ಪ್ರತಿನಿಧಿ ಮಮತ ಕೇಶವ ನೀರಕಟ್ಟೆ, ಪ್ರಗತಿಪರ ಕೃಷಿಕ ಯಾಮಣ್ಣ ಗೌಡ ಬೆದ್ರೋಡಿ ಸುಳ್ಯರವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ತಾಂಡವ ನೃತ್ಯಾಲಯದ ಸದಸ್ಯರಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ. ಸಂಜೆ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ನಡ್ಪ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಶ್ರೀ ಗಣೇಶ ವಿಗ್ರಹದ ಶೋಭಾಯಾತ್ರೆಯು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಹೊರಟು ಪಡ್ಪು ದೈವಸ್ಥಾನ ಮುಂಭಾಗದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ನೀರಕಟ್ಟೆಗೆ ತೆರಳಿ ಅಲ್ಲಿಂತ ವಳಾಲುಗೆ ಆಗಮಿಸಿ ಮುಗೇರಡ್ಕ ತೂಗು ಸೇತುವೆ ಬಳಿಯಲ್ಲಿ ವಿಗ್ರಹದ ಜಲಸ್ತಂಭನ ನಡೆಯಲಿದೆ. ಜಲಸ್ತಂಭನ ಸ್ಥಳದಲ್ಲಿ ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಬೆದ್ರೋಡಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.