ಸೆ.02: ಈಶ್ವರಮಂಗಲದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ, ವಿವಿಧ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

ಈಶ್ವರಮಂಗಲ: ಇಲ್ಲಿನ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಸೆ.02 ರಂಧು ನಡೆಯಲಿದೆ. ಬೆಳಿಗ್ಗೆ ಶ್ರೀ ಗಣಪತಿ ಹೋಮ, ವಿಗ್ರಹ ಪ್ರತಿಷ್ಠೆ ನಡೆಯಲಿದೆ. ಬಳಿಕ ಶ್ರೀ ಪಂಚಲಿಂಗೇಶ್ವರ ಭಜನಾ ಸಂಘ ಈಶ್ವರಮಂಗಲ ಹಾಗೂ ಒಡಿಯೂರು ಶ್ರೀ ಗುರುದೇವ ಗ್ರಾಮ ವಿಕಾಸ ಯೋಜನೆ ಈಶ್ವರಮಂಗಲ ಇವರಿಂದ ಭಜನಾ ಕಾರ್ಯಕ್ರಮ ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ರವೀಶ ತಂತ್ರಿಗಳು ಕುಂಟಾರುರವರು ಆಶೀವರ್ಚನ ನೀಡಲಿದ್ದು, ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರವೀಣ್ ರೈ ಮೇನಾಲ ಸಭಾ ಅಧ್ಯಕ್ಷತೆ ವಹಿಸಲಿದ್ದಾರೆ.

ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಳಿತಾಧಿಕಾರಿ ಸಂದೇಶ್ ಕೆ.ಎನ್, ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಅರಿಯಡ್ಕ ಮಹಿಳ್ನಾಥ ಶೆಟ್ಟಿ ಸಾಂತ್ಯರವರುಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಿವೃತ್ತ ಉಪನ್ಯಾಸಕಿ ಹಾಗೂ ಸಾಲಿಗ್ರಾಮ ಡಿವೈನ್ ಪಾರ್ಕ್ ಟ್ರಸ್ಟ್‌ನ ಸಂಪನ್ಮೂಲ ವ್ಯಕ್ತಿ ಪದ್ಮಲತಾ ಎಸ್.ಎನ್.ರಾವ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ಗಣೇಶೋತ್ಸವ ಕಾರ್ಯಕ್ರಮದಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪುರುಷರಿಗೆ ಕಬಡ್ಡಿ, ಹಗ್ಗ-ಜಗ್ಗಾಟ, ಮಹಿಳೆಯರಿಗೆ ಹಗ್ಗ-ಜಗ್ಗಾಟ(ಕೆಸರುಗದ್ದೆಯಲ್ಲಿ), ಸಾರ್ವಜನಿಕರಿಗೆ ರಂಗವಲ್ಲಿ ಸ್ಪರ್ಧೆ, ಶಾಲಾ ವಿದ್ಯಾರ್ಥಿಗಳಿಗೆ 1ರಿಂದ 10ನೇ ತರಗತಿ ತನಕ ವಿಭಾಗ ಮಟ್ಟದಲ್ಲಿ ಮತ್ತು ಸಾರ್ವಜನಿಕರಿಗೆ ಭಕ್ತಿಗೀತೆ ನಡೆಯಲಿದೆ. ಸಂಜೆ ಶ್ರೀ ಗಣೇಶನ ವೈಭವದ ಶೋಭಾಯಾತ್ರೆಯು ದೇವಸ್ಥಾನದ ವಠಾರದಿಂದ ಹೊರಟು ಈಶ್ವರಮಂಗಲ ಮುಖ್ಯಪೇಟೆಯಲ್ಲಿ ಸಾಗಿ ಪಟ್ಲಡ್ಕ ಹೊಳೆಯಲ್ಲಿ ವಿಸರ್ಜನೆ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.

ಸೆ.01 ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ

ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಸೆ.1ರಂದು ವಿದ್ಯಾರ್ಥಿಗಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ ನಡೆಯಲಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.