ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಸೆ.2ರಿಂದ 3ರ ವರೆಗೆ 38ನೇ ವರ್ಷದ ಗಣೇಶೋತ್ಸವ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ 38ನೇ ವರ್ಷದ ಗಣೇಶೋತ್ಸವವು ಸೆ.2ರಿಂದ  4ರವರೆಗೆ ವಿವೇಕಾನಂದ ಮಹಾವಿದ್ಯಾಲಯದ ಆವರಣದ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ. ಈ ಬಾರಿ ‘ಸಂಸ್ಕಾರ, ಸಂಸ್ಕೃತಿ ಮತ್ತು ಯವಜನತೆ’ ಎಂಬ ಪರಿಕಲ್ಪನೆಯಲ್ಲಿ ನಡೆಯಲಿದೆ.

ಸೆ. 2ರಂದು ಬೆಳಗ್ಗೆ 5.30ಕ್ಕೆ ಶ್ರೀ ಗಣೇಶ ವಿಗ್ರಹವನ್ನು ಪರ್ಲಡ್ಕದಿಂದ ತರಲಾಗುತ್ತದೆ. ಬೆಳಗ್ಗೆ 9ಗಂಟೆಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷೆ ಡಾ. ಸುಧಾ ಎಸ್. ರಾವ್ ಅವರು ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ನಂತರ 10ರವರೆಗೆ ಕಾಲೇಜಿನ ವಿದ್ಯಾರ್ಥಿಗಳಿಂದ ಭಜನೆ ನಡೆಯಲಿದೆ. ಬೆಳಗ್ಗೆ 9.30ರಿಂದ ಗಣಪತಿ ಹವನ ನಡೆಯಲಿದೆ. 10 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಭ್ಯಾಗತರಾಗಿ ಬೆಳ್ತಂಗಡಿ ವಿಧಾನಸಭಾಕ್ಷೇತ್ರದ ಶಾಸಕ ಹರೀಶ್ ಪೂಂಜ ಹಾಗೂ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣಭಟ್ ಆಗಮಿಸಲಿದ್ದಾರೆ. ಬೆಳಗ್ಗೆ 11.30ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳಿಂದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಾಹಾಪೂಜೆ ನಡೆಯಲಿದೆ.

ಅಪರಾಹ್ನ 2ರಿಂದ ವಿವೇಕಾನಂದ ವಿವಿಧ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 5ಕ್ಕೆ ಭಜನೆ ನಡೆಯಲಿದ್ದು. 7ರಿಂದ ದೇವರಿಗೆ ರಂಗಪೂಜೆ ಹಾಗೂ ಮಹಾಪೂಜೆ ನಡೆಯಲಿದೆ. ಸೆ.3ರಂದು ಬೆಳಗ್ಗೆ 8.30ಕ್ಕೆ ಗಣಪತಿ ಹವನ, 9ರಿಂದ ರಾಮಕೃಷ್ಣ ಕಾಟುಕುಕ್ಕೆ ಮತ್ತು ಬಳಗದವರಿಂದ ದಾಸ ಸಂಕೀರ್ತನೆ, 10ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಹಿಸಲಿದ್ದಾರೆ.

ಅಭ್ಯಾಗತರಾಗಿ ಮಂಗಳೂರು ವಿಭಾಗದ ಪೊಲೀಸ್ ಕಮೀಷನರ್ ಡಾ.ಪಿ.ಎಸ್. ಹರ್ಷ, ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ಸಂಘದ ಜೊತೆ ಕಾರ್ಯದರ್ಶಿ ಕೃಷ್ಣ ಕುಮಾರ್ ಶೆಟ್ಟಿ ಕಡಬ ಆಗಮಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಮಹಾಪೂಜೆ ನಡೆಯಲಿದೆ. ಅಪರಾಹ್ನ 2ರಿಂದ ಕಥಕ್ಕಳಿ ಪ್ರದರ್ಶನ ಮತ್ತು ಕುಚೇಲ ವೃತ್ತಂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 5ರಿಂದ ಭಜನೆ ನಡೆಯಲಿದೆ. 7.30ಕ್ಕೆ ರಂಗಪೂಜೆ, ಮಹಾಪೂಜೆ ನಡೆಯಲಿದೆ.

ಸೆ.4ರಂದು ಬೆಳಗ್ಗೆ 8.30ಕ್ಕೆ ಶ್ರೀ ಗಣಪತಿ ಹವನ, 9ಕ್ಕೆ ಭಜನೆ, 10ರಿಂದ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ರಾಮಾಶ್ವಮೇಧ ಯಕ್ಷಗಾನ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಮಹಾ ಪೂಜೆ ನಡೆಯಲಿದೆ. ಅಪರಾಹ್ನ 2ರಿಂದ ಶ್ರೀ ಗಣೇಶ ವಿಗ್ರಹದ ಶೋಭಾಯಾತ್ರೆ ಮತ್ತು ವಿಸರ್ಜನೆ ನಡೆಯಲಿದೆ ಎಂದು ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.