ಸೆ.2-3:ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ವಿದ್ಯಾಲಯದಲ್ಲಿ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Puttur_Advt_NewsUnder_1
Puttur_Advt_NewsUnder_1


ಆಲಂಕಾರು ಶ್ರೀ ದುರ್ಗಾಂಬಾ ವಿದ್ಯಾವರ್ಧಕ ಸಂಘ ರಿ. ಇದರ ಆಶ್ರಯದಲ್ಲಿ  ಸೆ.2 ಸೋಮವಾರದಿಂದ ಸೆ.3 ಮಂಗಳವಾರ ತನಕ ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ವಿದ್ಯಾಲಯದಲ್ಲಿ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ನಡೆಯಲಿದೆ.

ಸೋಮವಾರ ಬೆಳಿಗ್ಗೆ 8ರಿಂದ ಗಣೇಶ ಪ್ರತಿಷ್ಠೆ, ಗಣಪತಿ ಹೋಮ ಪಾಂಡುರಂಗ ಭಜನಾ ಮಂಡಳಿ ಮನವಳಿಕೆ ಹಾಗೂ ಆದಿ ಶಕ್ತಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಶರವೂರು ಇವರಿಂದ ಭಜನೆ ನಡೆದು ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆ ನಡೆಯಲಿದೆ, ಅಪರಾಹ್ನ ಶ್ರೀ ಹರಿ ಭಜನಾ ಮಂಡಳಿ ಗಾಣಂತಿ ಯವರಿಂದ ಭಜನೆ ನಡೆದು, ಮಹಾಪೂಜೆಯಾಗಿ ಪ್ರಸಾದ ವಿತರಣೆ ನಡೆಯಲಿದೆ.

ಸೆ.3 ಮಂಗಳವಾರ ಬೆಳಿಗ್ಗೆ ಗಣಪತಿ ಹೋಮ ನಂತರ ದುರ್ಗಾಂಬಾ ಪದವಿ ಪೂರ್ವ ವಿದ್ಯಾರ್ಥಿಗಳಿಂದ ಹಾಗೂ ಶ್ರೀ ಶಾರದಾ ಭಜನಾ ಮಂಡಳಿ ಕುಂತೂರು ಇವರಿಂದ ಭಜನೆ ನಡೆದು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆಯಾಗಿ, ಅಪರಾಹ್ನ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರಾಮಣ್ಣ ಗೌಡ ವಹಿಸಲಿದ್ದು, ನೆಲ್ಯಾಡಿ ಸಂತಜಾರ್ಜ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ವಿಶ್ವನಾಥ ಶೆಟ್ಟಿ ಧಾರ್ಮಿಕ ಉಪನ್ಯಾಸ ಮಾಡಲಿದ್ದು ನಂತರ ಮಹಾಪೂಜೆಯಾಗಿ ಆಲಂಕಾರಿನಿಂದ ಕುಂತೂರುವರೆಗೆ ಶ್ರೀ ಗಣೇಶನ ವಿಗ್ರಹದ ಶೋಭಾಯಾತ್ರೆ ನಡೆದು ಕುಂತೂರುನಲ್ಲಿ ಶ್ರೀ ಗಣೇಶ ವಿಗ್ರಹದ ಜಲಸ್ಥಂಭನಗೊಳ್ಳಲಿದೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆ ಗುತ್ತು, ಕಾರ್‍ಯದರ್ಶಿ ಈಶ್ವರ ಗೌಡ ಪಜ್ಜಡ್ಕ, ಮುಖ್ಯಗುರುಗಳಾದ ಸತ್ಯನಾರಾಯಣ ಭಟ್, ಪ್ರಾಂಶುಪಾಲರಾದ ನವೀನ್ ಕುಮಾರ್.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.